ಬೆಂಗಳೂರು: ಬೇಲೆಕೇರಿ ಬಂದರಿನಿಂದ ಅದಿರು ಅಕ್ರಮ ಸಾಗಾಟ ಪ್ರಕರಣದಲ್ಲಿ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಅವರಿಗೆ 7 ವರ್ಷ ಜೈಲು ಶಿಕ್ಷೆಯಾಗಿದೆ.
ಪ್ರಕರಣ ಸಂಬಂಧ ಶನಿವಾರ ಶಿಕ್ಷೆಯ ಪ್ರಮಾಣವನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಪ್ರಕಟಿಸಿದೆ.
ಕಾರವಾರದ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ಗೆ ಮೂರನೇ ಪ್ರಕರಣದಲ್ಲಿ ಕೋರ್ಟ್ ಈ ಶಿಕ್ಷೆ ಪ್ರಕಟಿಸಿದೆ. ಇನ್ನುಳಿದ ಪ್ರಕರಣಗಳಲ್ಲಿಯೂ ಶಿಕ್ಷೆ ಹಾಗೂ ದಂಡ ಪ್ರಕಟಿಸಲಾಗಿದೆ.
ಪ್ರಕರಣ ಬಗ್ಗೆ ಸುದೀರ್ಘ ವಿಚಾರಣೆ ನಡೆಸಿ ವಾದ-ಪ್ರತಿವಾದ ಆಲಿಸಿದ್ದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಅಕ್ಟೋಬರ್ 24 ರಂದು ತೀರ್ಪು ಪ್ರಕಟಿಸಿ ಶಾಸಕ ಸತೀಶ್ ಸೈಲ್ ಅವರನ್ನು ದೋಷಿ ಎಂದು ಘೋಷಿಸಿತ್ತು. ಶಿಕ್ಷೆಯ ಪ್ರಮಾಣವನ್ನು ಶನಿವಾರ ಪ್ರಕಟಿಸಿದೆ.