ಬೆಂಗಳೂರು: ಬೆಂಗಳೂರಿನಲ್ಲಿರುವ ವಿಧಾನಸಭಾ ಕ್ಷೇತ್ರಗಳಿಗೆ ಅನುದಾನ ಹಂಚಿಕೆ ವಿಚಾರದಲ್ಲಿ ರಾಜ್ಯ ಸರ್ಕಾರ ತಾರತಮ್ಯ ಮಾಡಿದೆ ಎಂದು ಕಾಂಗ್ರೆಸ್ ನಾಯಕ, ಮಾಜಿ ಸಚಿವ ರಾಮಲಿಂಗಾ ರೆಡ್ಡಿ ಆರೋಪಿಸಿದ್ದಾರೆ.
ಬಿಜೆಪಿ ಸರ್ಕಾರ ಬೆಂಗಳೂರಿನ ತಮ್ಮ ಶಾಸಕರಿರುವ 15 ಕ್ಷೇತ್ರಗಳಿಗೆ ಒಟ್ಟು 9888 ಕೋಟಿ ಅನುದಾನ ನೀಡಿದೆ. ಕಾಂಗ್ರೆಸ್ ಶಾಸಕರ 12 ಕ್ಷೇತ್ರಗಳಿಗೆ ಕೇವಲ 2,186 ಕೋಟಿ ಅನುದಾನ ಕೊಟ್ಟಿದೆ. ಬಿಜೆಪಿ ಸರ್ಕಾರ ಕಾಂಗ್ರೆಸ್ ಶಾಸಕರ ಕ್ಷೇತ್ರಗಳಿಗಿಂತಲೂ 5ಪಟ್ಟು ಹೆಚ್ಚಿನ ಅನುದಾನ ತಮ್ಮ ಶಾಸಕರಿಗೆ ನೀಡಿ ತಾರತಮ್ಯ ಎಸಗಿದೆ ಎಂದು ಅವರು ಆರೋಪಿಸಿದ್ದಾರೆ.
ಬಿಜೆಪಿ ಶಾಸಕರ ಕ್ಷೇತ್ರಗಳಿಗೆ 9888 ಕೋಟಿ, ಕಾಂಗ್ರೆಸ್ ಎಂಎಲ್‌ಎಗಳ ಕ್ಷೇತ್ರಗಳಿಗೆ 2186 ಕೋಟಿ ಅನುದಾನ