ದೆಹಲಿ: ಆಫ್ಘಾನಿಸ್ತಾನದಲ್ಲಿರುವ ಭಾರತೀಯರ ರಕ್ಷಣೆಗಾಗಿ ಸರ್ವ ರೀತಿ ಪ್ರಯತ್ನ ಮಾಡಲಾಗುತ್ತದೆ ಎಂದು ಕೇಂದ್ರ ವಿದೇಶಾಂಗ ಸಚಿವ ಎಸ್ ಜೈಶಂಕರ್ ಹೇಳಿದ್ದಾರೆ.
ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಕಾರ್ಯಕ್ರಮದಲ್ಲಿ ಮಾತನಾಡಿದ ಎಸ್ ಜೈಶಂಕರ್, ‘ಭಾರತವು ಅಫ್ಘಾನ್ ಜನರೊಂದಿಗೆ ಐತಿಹಾಸಿಕ ಸಂಬಂಧವನ್ನು ಹೊಂದಿದೆ ಎಂದರು. ಆಫ್ಘಾನಿಸ್ತಾನದ ಪರಿಸ್ಥಿತಿ ಕುರಿತು ನಾವು ಗಮನ ಕೇಂದ್ರೀಕರಿಸಿದ್ದೇವೆ. ಆಪ್ಘನ್ ದೇಶದಲ್ಲಿ ಇರುವ ಭಾರತೀಯ ಪ್ರಜೆಗಳನ್ನು ಸುರಕ್ಷಿತವಾಗಿ ದೇಶಕ್ಕೆ ಕರೆತರುವುದು ನಮ್ಮ ಮೊದಲ ಆದ್ಯತೆಯಾಗಿದೆ ಎಂದು ಹೇಳಿದರು.
ಪಾಕಿಸ್ತಾನ ಮೂಲದ ಲಷ್ಕರ್-ಎ-ತೊಯ್ಬಾ ಮತ್ತು ಜೈಶ್-ಇ-ಮೊಹಮ್ಮದ್ ಸಂಘಟನೆಗಳು ಅಫ್ಘಾನಿಸ್ತಾನದ ಪರಿಸ್ಥಿತಿಯ ಲಾಭವನ್ನು ಪಡೆದುಕೊಳ್ಳಬಹುದು ಎಂದು ಅವರು ಆತಂಕವನ್ನೂ ವ್ಯಕ್ತಪಡಿಸಿದರು.