ಮಂಗಳೂರು: ಬಂಟ್ವಾಳ ಬಳಿ ಅಬ್ದುಲ್ ರಹಿಮಾನ್ ಎಂಬ ಯುವಕನ ಹತ್ಯೆ ಘಟನೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪರಿಸ್ಥಿತಿಯನ್ನು ಮತ್ತೊಮ್ಮೆ ಆತಂಕಕ್ಕೆ ತಳ್ಳಿದೆ.
ಅಬ್ದುಲ್ ರಹಿಮಾನ್ ಮಂಗಳವಾರ ಕೊಲೆಯಾಗಿದ್ದು, ಮೃತದೇಹವನ್ನು ಬುಧವಾರ ಬೆಳಿಗ್ಗೆ ಬಂಟ್ವಾಳ ಸಮೀಪದ ಬಿಸಿ ರೋಡ್ ಬಳಿ ಮಸೀದಿಗೆ ತರಲಾಯಿತು. ಆಗ ಸಂದರ್ಭದಲ್ಲಿ ಭಾರೀ ಸಂಖ್ಯೆಯಲ್ಲಿ ಜನ ಜಮಾಯಿಸಿದ್ದರು. ಯಾವುದೇ ಅಹಿತಕರ ಘಟನೆ ನಡೆಯದಂತೆ ಪೋಲಿಸರು ಬಿಗಿ ಬಂದೋಬಸ್ತ್ ಕೈಗೊಂಡಿದ್ದರು.
ಕೊಲೆ ಪ್ರಕರಣ ಸಂಬಂಧ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಮೊಹಮ್ಮದ್ ನಿಸಾರ್ ಎಂಬುವರು ನೀಡಿದ ದೂರು ಆಧರಿಸಿ,15 ಜನರ ವಿರುದ್ಧ ಬಿಎನ್ಎಸ್ ಕಾಯ್ದೆ ಅಡಿ ಎಫ್ಐಆರ್ ದಾಖಲಾಗಿದೆ.