ಗ್ರೇಟರ್ ಬೆಂಗಳೂರು ವಿಷಯಕ್ಕೆ ಸಂಬಂಧಿಸಿದಂತೆ ಉತ್ತರ ನೀಡುವಂತೆ ಸರ್ಕಾರಕ್ಕೆ ಕೋರ್ಟ್ ಸೂಚನೆ ನೀಡಿದೆ. ಇದನ್ನೇ ಮುಂದಿಟ್ಟುಕೊಂಡು ಅಭಿವೃದ್ಧಿ ಕೆಲಸ ಮಾಡುತ್ತಿಲ್ಲ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ದೂರಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಸದ ರಾಶಿ ಎಲ್ಲ ಕಡೆ ಇದೆ. ಆಸ್ಪತ್ರೆಗಳಲ್ಲಿ ಸಂಬಳ ಪಾವತಿಯಾಗಿಲ್ಲ. ಶಾಲೆಗಳ ಶಿಕ್ಷಕರನ್ನು ವಜಾ ಮಾಡಲಾಗುತ್ತಿದೆ. ಬೆಂಗಳೂರಿನ ಅಭಿವೃದ್ಧಿ ಮಾಡಲಾಗದೆ ಐದು ಪಾಲಿಕೆ ಮಾಡುವ ವಿಷಯವನ್ನು ಮುನ್ನೆಲೆಗೆ ತರಲಾಗಿದೆ. ಎಲ್ಲದಕ್ಕೂ ಜನರ ಮೇಲೆ ತೆರಿಗೆ ಹೇರಲಾಗಿದೆ. ಇ ಖಾತಾದಿಂದಾಗಿ ಎಲ್ಲೂ ನೋಂದಣಿ ಮಾಡಲು ಆಗುತ್ತಿಲ್ಲ. ಕಾಂಗ್ರೆಸ್ ವಾಮಮಾರ್ಗದಲ್ಲಿ ಗೆಲ್ಲಲು ಈ ರೀತಿ ಪಾಲಿಕೆಗಳನ್ನು ರಚಿಸುತ್ತಿದೆ ಎಂದು ದೂರಿದರು.
ಬೆಂಗಳೂರನ್ನು ಹೋಳು ಮಾಡುವುದನ್ನು ಬಿಜೆಪಿ ಯಾವಾಗಲೂ ವಿರೋಧ ಮಾಡಲಿದೆ. ವಿಧಾನಸಭೆ ಅಧಿವೇಶನದಲ್ಲೂ ಇದನ್ನು ವಿರೋಧಿಸಲಾಗುವುದು ಎಂದು ಅಶೋಕ್ ತಿಳಿಸಿದರು.
ಮುಡಾ ಹಗರಣದ ವಿರುದ್ಧದ ಬಿಜೆಪಿಯ ಹೋರಾಟದ ಫಲವಾಗಿ ಸಿಎಂ ಸಿದ್ದರಾಮಯ್ಯ ನಿವೇಶನಗಳನ್ನು ವಾಪಸ್ ಮಾಡಿದ್ದಾರೆ. ತಪ್ಪಾಗಿದೆ ಎಂಬ ಕಾರಣಕ್ಕೆ ಈ ರೀತಿ ಮಾಡಿದ್ದಾರೆ. ಮುಡಾ ಹಗರಣದ ವಿರುದ್ಧದ ಹೋರಾಟ ನಿಲ್ಲಿಸುವುದಿಲ್ಲ ಎಂದವರು ತಿಳಿಸಿದರು.







































































