ಅಯೋಧ್ಯೆ: ಅಯೋಧ್ಯೆಯ ರಾಮ ಮಂದಿರ ಲೋಕಾರ್ಪಣೆಯ ದಿನವಾದ ಜನವರಿ ೨೨ರಂದು ಇಡೀ ದೇಶ ಚಾರಿತ್ರಿಕ ದಿನಕ್ಕೆ ಸಾಕ್ಷಿಯಾಗಲಿದೆ. ಸೋಮವಾರ ನಡೆಯಲಿರುವ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮಕ್ಕೆ ವಿವಿಧ ಕ್ಷೇತ್ರಗಳ 8 ಸಾವಿರ ಗಣ್ಯರಿಗೆ ಆಹ್ವಾನ ನೀಡಲಾಗಿದೆ.
ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ ಸಮಾರಂಭಕ್ಕೆ ಸಿನಿಮಾ ತಾರೆಗಳು, ಕ್ರೀಡಾ ಕ್ಷೇತ್ರದ ಗಣ್ಯರು, ಉದ್ಯಮಿಗಳು, ರಾಜಕೀಯ ಧುರೀಣರು, ನ್ಯಾಯಮೂರ್ತಿಗಳು, ವಿಜ್ಞಾನಿಗಳೂ ಸೇರಿದಂತೆ ವಿವಿಧ ವಲಯದ ಒಟ್ಟು 8,000 ಗಣ್ಯರಿಗೆ ಆಹ್ವಾನ ನೀಡಲಾಗಿದೆ ಎಂದು ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ಪ್ರಮುಖರು ಮಾಹಿತಿ ಹಂಚಿಕೊಂಡಿದ್ದಾರೆ.
ಸಿನಿಮಾ ನಟರಾದ ಅಮಿತಾಬ್ ಬಚ್ಚನ್, ಸನ್ನಿ ಡಿಯೋಲ್, ಅಕ್ಷಯ್ ಕುಮಾರ್, ಅನುಪಮ್ ಖೇರ್, ಅಜಯ್ ದೇವಗನ್, ಕಂಗನಾ ರನೌತ್, ಮಾಧುರಿ ದೀಕ್ಷಿತ್. ಹೇಮಾ ಮಾಲಿನಿ, ರಜನಿಕಾಂತ್, ಪ್ರಭಾಸ್, ಅಲ್ಲು ಅರ್ಜುನ್, ಜೂನಿಯರ್ ಎನ್ಟಿಆರ್ಐ ಸಹಿತ ನಕ್ಕಿಕ ತಾರೆಯರು, ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಮತ್ತು ರಂಜನ್ ಗೊಗೊಯ್ ಸಹಿತ ನ್ಯಾಯಾಂಗ ಕ್ಷೇತ್ರದ ಗಣ್ಯರನ್ನು, ಉದ್ಯಮಿಗಳಾದ ಮುಕೇಶ್ ಅಂಬಾನಿ, ಗೌತಮ್ ಅದಾನಿ, ರತನ್ ಟಾಟಾ, ಕುಮಾರ ಮಂಗಲಂ ಬಿರ್ಲಾ, ಎನ್.ಆರ್.ನಾರಾಯಣಮೂರ್ತಿ ಮತ್ತು ಸುಧಾಮೂರ್ತಿ, ಸಹಿತ ಅನೇಕ ಗಣ್ಯರನ್ನು ಆಮಂತ್ರಿಸಲಾಗಿದೆ ಎಂದು ಟ್ರಸ್ಟ್ ಪ್ರಮುಖರು ತಿಳಿಸಿದ್ದಾರೆ.































































