ನವದೆಹಲಿ: ಪಂಚ ರಾಜ್ಯಗಳ ಚುನಾವಣೆಯಲ್ಲಿ ಕಾಂಗ್ರೆಸ್ ಹಾಗೂ ಅದರ ಮಿತ್ರಪಕ್ಷಗಳು ಹೆಚ್ಚಿನ ನಷ್ಟವನ್ನು ಅನುಭವಿಸಿದರೆ, ಬಿಜೆಪಿ ಹಲವು ರಾಜ್ಯಗಳಲ್ಲಿ ತನ್ನ ಬಲವನ್ನು ಮತ್ತಷ್ಟು ವಿಸ್ತರಿಸಿದೆ. ವಿಶೇಷವಾಗಿ ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಪ್ರಭಾವ ಹೆಚ್ಚುತ್ತಿರುವ ಸೂಚನೆಗಳು ಗೋಚರಿಸುತ್ತಿದ್ದು, ಅಸ್ಸಾಂ ಮತ್ತು ಪುದುಚೇರಿಯಲ್ಲಿ ಬಿಜೆಪಿ ಪಾರುಪತ್ಯ ಮುಂದುವರಿದಿದೆ.
ಅಸ್ಸಾಂ ವಿಧಾನಸಭೆ ಚುನಾವಣೆಯಲ್ಲಿ 126 ಸ್ಥಾನಗಳ ಪೈಕಿ ಬಹುಮತಕ್ಕೆ 64 ಸ್ಥಾನಗಳ ಅಗತ್ಯವಿದೆ. ಬಿಜೆಪಿ 101 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಕಾಂಗ್ರೆಸ್ 23 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದರೆ, ಎಐಯುಡಿಎಫ್ 2 ಕ್ಷೇತ್ರಗಳಲ್ಲಿ ಮುನ್ನಡೆಯಲ್ಲಿದೆ.
ಪುದುಚೇರಿ ವಿಧಾನಸಭೆಯ 30 ಸ್ಥಾನಗಳ ಪೈಕಿ ಬಹುಮತಕ್ಕೆ 16 ಸ್ಥಾನಗಳು ಬೇಕಾಗಿವೆ. ಬಿಜೆಪಿ 20 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಕಾಂಗ್ರೆಸ್ 7 ಕ್ಷೇತ್ರಗಳಲ್ಲಿ, ಇತರರು 3 ಕ್ಷೇತ್ರಗಳಲ್ಲಿ ಮುನ್ನಡೆಯಲ್ಲಿದ್ದಾರೆ.






















































