ನವದೆಹಲಿ: ಲೋಕಸಭಾ ಚುನಾವಣೆ ಜಿದ್ದಾಜಿದ್ದಿನ ಅಖಾಡಕ್ಕೆ ಸಾಕ್ಷಿಯಾಗುತ್ತಿದ್ದು 10 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಮತದಾನ ನಡೆಯುತ್ತಿದೆ. ಆಂಧ್ರಪ್ರದೇಶದ ವಿಧಾನಸಭೆಗೂ ಮತದಾನ ಸಾಗಿದೆ.
ಲೋಕಸಭಾ ಚುನಾವಣೆಯ ನಾಲ್ಕನೇ ಹಂತದ ಮತದಾನ ಪ್ರಕ್ರಿಯೆ ಇದಾಗಿದ್ದು ಚುನಾವಣಾ ಇಲಾಖೆ ಸಕಲ ತಯಾರಿ ನಡೆಸಿದೆ. 96 ಸ್ಥಾನಗಳಲ್ಲಿ ಸೋಮವಾರ ಮತದಾನ ನಡೆಯಲಿದ್ದು 1,717 ಅಭ್ಯರ್ಥಿಗಳ ಭವಿಷ್ಯ ನಿರ್ಧಾರವಾಗಲಿದೆ.
ಸೋಮವಾರ 4ನೇ ಹಂತದ ಮತದಾನ ದೊಂದಿಗೆ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಮತದಾನ ಪ್ರಕ್ರಿಯೆಗಳು ಪೂರ್ಣಗೊಳ್ಳಲಿವೆ.