ಹೈದರಾಬಾದ್: ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಕೊನಿಜೇಟಿ ರೋಸಯ್ಯ ಅವರು ವಿಧಿವಶರಾಗಿದ್ದಾರೆ. ತಮಿಳುನಾಡಿನ ಮಾಜಿ ರಾಜ್ಯಪಾಲರೂ ಆದ ರೋಸಯ್ಯ ಅವರು ಕೆಲ ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಶನಿವಾರ ಮುಂಜಾನೆ ವಿಧಿವಶರಾಗಿದ್ದಾರೆ. ಅವರಿಗೆ 88 ವರ್ಷ ವಯಸ್ಸಾಗಿತ್ತು.
ರಕ್ತದೊತ್ತಡ ತೀವ್ರವಾಗಿ ಕುಸಿದ ಹಿನ್ನೆಲೆಯಲ್ಲಿ ಬಳಲಿದ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಅಷ್ಟರಲ್ಲೇ ಅವರು ಕೊನೆಯುಸಿರು ಎಳೆದಿದ್ದರು.
ರೋಸಯ್ಯ ಅವರ ನಿಧನಕ್ಕೆ ನಾಯಕರನೇಕರು ಸಂತಾಪ ವ್ಯಕ್ತಪಡಿಸಿದ್ದಾರೆ.