ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಗಸ್ಟ್ 3ರಂದು ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಲಿದ್ದಾರೆ. ಅಂದು ಬೆಳಗ್ಗೆ 11 ಗಂಟೆಗೆ ಸಿದ್ದರಾಮಯ್ಯ ಅವರು ಮೋದಿಯವರನ್ನು ಭೇಟಿಯಾಗಿ ಮಾತುಕತೆ ನಡೆಸಲಿದ್ದಾರೆ.
ಅದೇ ದಿನ ಮುಖ್ಯಮಂತ್ರಿಯವರು ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್, ರಕ್ಷಣಾ ಸಚಿವರಾದ ರಾಜನಾಥ ಸಿಂಗ್ ಹಾಗೂ ಭೂ ಸಾರಿಗೆ ಸಚಿವರಾದ ನಿತಿನ್ ಗಡ್ಕರಿ ಅವರನ್ನು ಭೇಟಿಯಾಗಲಿದ್ದಾರೆ ಎಂದು ಮುಖ್ಯಮಂತ್ರಿ ಕಚೇರಿ ಮೂಲಗಳು ತಿಳಿಸಿವೆ.



























































