ದೆಹಲಿ: ಆಜಾದಿ ಕಾ ಅಮೃತ್ ಮಹೋತ್ಸವ್” ಅಂಗವಾಗಿ ಭಾರತ ಸರ್ಕಾರದಿಂದ ಪ್ರಾಯೋಜನೆಗೊಂಡ ವಿವಿಧ ಯೋಜನೆಗಳ ಕಾರ್ಯಕ್ರಮಗಳ ಕುರಿತಾಗಿ ಫಲಾನುಭವಿಗಳೊಂದಿಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿಜಿ ಅವರು ಹಿಮಾಚಲ ಪ್ರದೇಶದ ಶಿಮ್ಲಾದಿಂದ ವಿಡಿಯೋ ಸಂವಾದ ನಡೆಸಿದರು.
Addressing ‘Garib Kalyan Sammelan’ in Shimla. Watch. https://t.co/XEekMT4DYQ
— Narendra Modi (@narendramodi) May 31, 2022
ಈ ಕಾರ್ಯಕ್ರಮವನ್ನು ಮಣಿಪಾಲ ರಜತಾದ್ರಿಯ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದು, ಶಾಸಕರಾದ ಕೆ. ರಘುಪತಿ ಭಟ್ ಅವರು ಅಧ್ಯಕ್ಷತೆ ವಹಿಸಿದ್ದರು.
ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವರಾದ ಶೋಭಾ ಕರಂದ್ಲಾಜೆ ಅವರು ಉಡುಪಿ ಜಿಲ್ಲೆಯ 13 ವಿವಿಧ ಯೋಜನೆಗಳ ಫಲಾನುಭವಿಗಳೊಂದಿಗೆ ಸಂವಾದ ನಡೆಸಿದರು.
ಈ ಸಂದರ್ಭದಲ್ಲಿ ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಮಟ್ಟಾರು ರತ್ನಾಕರ ಹೆಗ್ಡೆ, ಉಡುಪಿ ನಗರ ಸಭೆಯ ಅಧ್ಯಕ್ಷರಾದ ಸುಮಿತ್ರಾ ಆರ್ ನಾಯಕ್ ಮತ್ತು ಉಡುಪಿ ಜಿಲ್ಲಾಧಿಕಾರಿಗಳಾದ ಕೂರ್ಮಾ ರಾವ್ ಎಂ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಪ್ರಸನ್ನ ಎಚ್ ಹಾಗೂ ವಿವಿಧ ಯೋಜನೆಗಳ ಫಲಾನುಭವಿಗಳು ಉಪಸ್ಥಿತರಿದ್ದರು.


















































