ಮಂಗಳೂರು: ಆಟೋ ರಿಕ್ಷಾ ಸ್ಫೋಟಗೊಂಡ ಮಂಗಳೂರಿಗೆ ಗೃಹ ಸಚಿವ ಅರಗ ಜ್ಞಾನೇಂದ್ರ ಹಾಗೂ ಪೊಲೀಸ್ ಮಹಾ ನಿರ್ದೇಶಕ ಪ್ರವೀಣ್ ಸೂದ್ ಭೇಟಿ ನೀಡಿ ಪರಿಸ್ಥಿತಿಯನ್ನು ಅವಲೋಕಿಸಿದರು.
ಘಟನಾ ಸ್ಳಳದಲ್ಲಿನ ಸ್ಥಿತಿಗತಿ ಬಗ್ಗೆ ಸ್ಥಳೀಯ ಅಧಿಕಾರಿಗಳಿಂದ ಮಾಹಿತಿ ಪಡೆದರು. ಮಂಗಳೂರಿನಲ್ಲಿ ಅಧಿಕಾರಿಗಳ ಸಭೆ ನಡೆಸಿ, ಸಮರ್ಪಕ ತನಿಖೆ ನಡೆಸುವಂತೆ ಸೂಚಿಸಿದರು.
ಮಂಗಳೂರಿನಲ್ಲಿ ಬಾಂಬ್ ಸ್ಫೋಟ ಘಟನೆ ಸಂಬಂಧ, ಮಂಗಳೂರಿನಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಚರ್ಚಿಸಲಾಯಿತು.
ರಾಜ್ಯ ಪೊಲೀಸ್ ಮಹಾನಿರ್ದೇಶಕ ಶ್ರೀ ಪ್ರವೀಣ್ ಸೂದ್, ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು@BSBommai pic.twitter.com/In2FtGQNaU— Araga Jnanendra( ಮೋದಿ ಅವರ ಕುಟುಂಬ) (@JnanendraAraga) November 23, 2022
ಇದೇ ಸಂದರ್ಭದಲ್ಲಿ ಸಚಿವ ಅರಗ ಜ್ಞಾನೇಂದ್ರ ಅವರು, ಸ್ಪೋಟ ಪ್ರಕರಣದಲ್ಲಿ ಗಾಯಗೊಂಡಿರುವ ಆಟೋ ಚಾಲಕ ಪುರುಷೋತ್ತಮ ಪೂಜಾರಿ ಅವರ ಯೋಗಕ್ಷೇಮ ವಿಚಾರಿಸಿದರು. ಪೂಜಾರಿ ಅವರ ಚಿಕಿತ್ಸೆಗಾಗಿ ವೈಯಕ್ತಿಕವಾಗಿ ಸಹಾಯ ನೀಡಿ, ಕುಟುಂಬದವರಿಗೆ ಧೈರ್ಯ ಹೇಳಲಾಯಿತು.

























































