ಹೈದರಾಬಾದ್: ಆನ್ಲೈನ್ ಕ್ರಿಕೆಟ್ ಬೆಟ್ಟಿಂಗ್ ಸಿಂಡಿಕೇಟ್ ಅನ್ನು ಸೈಬರಾಬಾದ್ ಪೊಲೀಸರು ಯಶಸ್ವಿಯಾಗಿ ಬೇಧಿಸಿದ್ದು, ನಾಲ್ವರು ಬುಕ್ಕಿಗಳನ್ನು ಬಂಧಿಸಿದ್ದಾರೆ. ಕಾರ್ಯಾಚರಣೆಯ ಸಂದರ್ಭದಲ್ಲಿ ಪೊಲೀಸರು ಶಂಕಿತರಿಂದ 40 ಲಕ್ಷ ರೂಪಾಯಿ ಹಣವನ್ನು ವಶಪಡಿಸಿಕೊಂಡಿದ್ದು, ಸುಮಾರು 3.57 ಲಕ್ಷ ರೂಪಾಯಿಗಳ ಐದು ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸಿದ್ದಾರೆ.
ಮಾದಾಪುರ ಮತ್ತು ಮಿಯಾಪುರ ಪೊಲೀಸರ ವಿಶೇಷ ಕಾರ್ಯಾಚರಣೆ ತಂಡ (ಎಸ್ಒಟಿ) ಮಿಯಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಅಪಾರ್ಟ್ಮೆಂಟ್ನಲ್ಲಿ ಬುಕ್ಕಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಈ ಆರೋಪಿಗಳು ಕ್ರಿಕೆಟ್ ಲೈವ್ ಗುರು ಮತ್ತು ಲಕ್ಕಿ ಆನ್ಲೈನ್ ಅಪ್ಲಿಕೇಶನ್ಗಳನ್ನು ಬಳಸಿಕೊಂಡು ಆನ್ಲೈನ್ ಕ್ರಿಕೆಟ್ ಬೆಟ್ಟಿಂಗ್ ಚಟುವಟಿಕೆಗಳನ್ನು ಆಯೋಜಿಸುತ್ತಿದ್ದರು, ನಡೆಯುತ್ತಿರುವ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಪಂದ್ಯಗಳ ಮೇಲೆ ಕೇಂದ್ರೀಕರಿಸಿದ್ದಾರೆ.