ಪಾಟ್ನಾ: ಆರ್ ಜೆಡಿ ನಾಯಕ ತೇಜಸ್ವಿ ಯಾದವ್ ಅವರ ಬೆಂಗಾವಲು ವಾಹನ ಅಪಘಾತಕ್ಕೀಡಾಗಿ ಓರ್ವ ಸಾವನ್ನಪ್ಪಿದ್ದಾನೆ. ಬಿಹಾರದ ಪುರ್ನಿಯಾ ಜಿಲ್ಲೆಯಲ್ಲಿ ಮಂಗಳವಾರ ಬೆಳಿಗ್ಗೆ ಈ ಅಪಘಾತ ಸಂಭವಿಸಿದೆ.
ತೇಜಸ್ವಿ ಯಾದವ್ ಅವರ ಬೆಂಗಾವಲು ವಾಹನ ನಿಯಂತ್ರಣ ತಪ್ಪಿ ಮತ್ತೊಂದು ವಾಹನಕ್ಕೆ ಢಿಕ್ಕಿಯಾಗಿದೆ. ಪರಿಣಾಮ ಓರ್ವ ಮೃತಪಟ್ಟು, ಮೂವರು ಗಾಯಗೊಂಡಿದ್ದಾರೆ.