ನವದೆಹಲಿ: ಆಲಮಟ್ಟಿ-ಕುಷ್ಟಗಿ ನೂತನ ರೈಲ್ವೆ ಮಾರ್ಗ ನಿರ್ಮಾಣ ಸಂಬಂಧ 2026ರ ಅಂತ್ಯದೊಳಗೆ ವಿವರವಾದ ಯೋಜನಾ ವರದಿ ಸಿದ್ದವಾಗಲಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ತಿಳಿಸಿದ್ದಾರೆ.
ಆಲಮಟ್ಟಿಯಿಂದ ಕುಷ್ಟಗಿವರೆಗೆ ನೂತನ ರೈಲ್ವೆ ಮಾರ್ಗದ ಕುರಿತಾಗಿ
ವಿಜಯಪುರದ ಸಂಸದರಾದ ರಮೇಶ್ ಜಿಗಜಿಣಗಿ ಹಾಗೂ ಬಾಗಲಕೋಟೆಯ ಸಂಸದರಾದ ಪಿಸಿ ಗದ್ದಿಗೌಡರ್ ಅವರು ಕೇಂದ್ರ ಸರ್ಕಾರವನ್ನು ಆಗ್ರಹಿಸಿದ್ದರು
ಕೇಂದ್ರ ರೈಲ್ವೆ ಸಚಿವರಾದ ಅಶ್ವಿನಿ ವೈಷ್ಣವ್ ಅವರನ್ನು ಸಂಸತ್ ಭವನದಲ್ಲಿ ಭೇಟಿ ಮಾಡಿ ಚರ್ಚಿಸಲಾಗಿತ್ತು. ಈ ನೂತನ ರೈಲ್ವೆ ಮಾರ್ಗದ ಸರ್ವೆ ಕಾರ್ಯ ಮುಗಿದಿದ್ದು, ಮೇ 2026ರ ಅಂತ್ಯದೊಳಗೆ ವಿವರವಾದ ಯೋಜನಾ ವರದಿ (DPR) ತಯಾರಾಗಲಿದೆ ಎಂದು ಪತ್ರ ಮುಖೇನ ತಿಳಿಸಿದ್ದಾರೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹಂಚಿಕೊಂಡಿದ್ದಾರೆ. .
ಕರ್ನಾಟಕದಲ್ಲಿ ರೈಲ್ವೆ ಸಂಪರ್ಕ ಮತ್ತಷ್ಟು ಹೆಚ್ಚು ಅಭಿವೃದ್ದಿಗೊಳಿಸುವ ಮೂಲಕ ವಾಣಿಜ್ಯೋದ್ಯಮದ ಜೊತೆ ಸುಲಭ ಸಂಚಾರಕ್ಕೆ ಹೆಚ್ಚಿನ ಪ್ರಾಶಸ್ತ್ಯ ನೀಡುತ್ತಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿ ಹಾಗೂ ಕೇಂದ್ರ ರೈಲ್ವೆ ಸಚಿವರಿಗೆ ಹಾಗೂ ಕೇಂದ್ರ ರೈಲ್ವೆ ರಾಜ್ಯ ಸಚಿವರಾದ ವಿ ಸೋಮಣ್ಣ ಅವರಿಗೆ
ಅವರಿಗೆ ಪ್ರಲ್ಹಾದ್ ಜೋಶಿ ಕೃತಜ್ಞತೆ ಸಲ್ಲಿಸಿದ್ದಾರೆ.






















































