ಕಲಬುರಗಿ: ರಾಜ್ಯದ ಹಲವೆಡೆ ಶನಿವಾರವೂ ಮಳೆಯಾಗಿದೆ. ಕಲಬುರಗಿ ಜಿಲ್ಲೆ ಆಳಂದದಲ್ಲಿ ಬಿರುಗಾಳಿ ಸಹಿತ ಮಳೆಯಾಗಿದ್ದು, ಈ ಸಂದರ್ಭದಲ್ಲಿ ನರೋಣಾ ಗ್ರಾಮದಲ್ಲಿ ಸಿಡಿಲು ಬಡಿದು 12 ವರ್ಷದ ಬಾಲಕ ಸಾವನ್ನಪ್ಪಿದ್ದಾರೆ. ಮೃತ ಬಾಲಕನನ್ನು ಮಹೇಶ ತೆಗ್ಗಿನಮನಿ (12) ಎಂದು ಗುರುತಿಸಲಾಗಿದೆ. ಬಾಲಕನ ಜೊತೆಗಿದ್ದ ತಂದೆ ನಾಗರಾಜ್ ಅವರೂ ಗಾಯಗೊಂಡಿದ್ದು ಅವರನ್ನು ಸ್ಥಳೀಯರು ಕಲಬುರಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ.
© 2020 Udaya News – Powered by RajasDigital.