ಬೆಂಗಳೂರು: ಕೇಂದ್ರ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಅವರ ಅಧ್ಯಕ್ಷತೆಯಲ್ಲಿ ನಡೆದ ಇಂಡಸ್ಟ್ರಿಯಲ್ ಕಾರಿಡಾರ್ ಯೋಜನೆಗಳ ಅಪೆಕ್ಸ್ ಮಾನಿಟರಿಂಗ್ ಅಥಾರಿಟಿಯ ಮೊದಲ ಸಭೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಭಾಗವಹಿಸಿದರು. ಈ ವರ್ಚುವಲ್ ಸಭೆಯಲ್ಲಿ ಕೇಂದ್ರ ಸಚಿವರಾದ ಪಿಯೂಷ್ ಗೋಯಲ್, ಅಶ್ವಿನಿ ವೈಷ್ಣವ್, ರಾಜ್ಯದ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ, ಕೈಗಾರಿಕಾ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಡಾ. ಇ.ವಿ. ರಮಣರೆಡ್ಡಿ, ಮುಖ್ಯಮಂತ್ರಿಯವರ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ್ ಪ್ರಸಾದ್ ಹಾಗೂ ಇತರ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.
© 2020 Udaya News – Powered by RajasDigital.













































































