ಶ್ರೀಹರಿಕೋಟಾ,ನ.27: ಇಸ್ರೋ ಮತ್ತೊಂದು ಸಾಧನೆಯನ್ನು ಮಾಡಿ ದೇಶದ ಹೆಸರನ್ನು ವಿಶ್ವ ಭೂಪಟದಲ್ಲಿ ಎತ್ತಿ ಹಿಡಿಯುವಂತೆ ಮಾಡಿದೆ. ಹೌದು.. ಇಂದು ಬೆಳಗ್ಗೆ ಆಂಧ್ರ ಪ್ರದೇಶದ ಶ್ರೀಹರಿಕೋಟಾದಲ್ಲಿರುವ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಸುಧಾರಿತ ಭೂ ವೀಕ್ಷಣೆ ಉಪಗ್ರಹ ಕಾರ್ಟೊಸ್ಯಾಟ್-3 ಹಾಗೂ 13 ಯುಎಸ್ ನ್ಯಾನೊ ಸ್ಯಾಟಲೈಟ್‌ಗಳನ್ನು ಯಶಸ್ವಿಯಾಗಿ ಉಡಾವಣೆಗೊಳಿಸಿದೆ. ಉಪಗ್ರಹಗಳನ್ನು ಹೊತ್ತೊಯ್ದ ಇಸ್ರೋದ ಉಡಾವಣಾ ವಾಹಕ ಪಿಎಸ್ಎಲ್ ವಿ-ಸಿ47 ರಾಕೆಟ್ ಕಕ್ಷೆ ಸೇರಿದೆ.
ಭೂಮಿಯ ಚಿತ್ರಣ ಹಾಗೂ ಮ್ಯಾಪ್‌ಗೆ ಸಂಬಂಧಿಸಿದ ಅಧ್ಯಯನಕ್ಕೆ ಸಹಾಯಕಾರಿಯಾಗುವ ಕಾರ್ಟೊಸ್ಯಾಟ್-3 ಉಪಗ್ರಹ ಸೇರಿದಂತೆ, ಅಮೆರಿಕದ 13 ಮೈಕ್ರೋ ಉಪಗ್ರಹಗಳನ್ನು ಇಸ್ರೋ ನಭಕ್ಕೆ ಕಳುಹಿಸಿದೆ. ಹೈ ರೆಸಲ್ಯೂಶನ್ ಇರುವ ಫೋಟೊಗಳನ್ನು ಸೆರೆ ಹಿಡಿಯುವ ಸಾಮರ್ಥ್ಯವಿರುವ 3ನೇ ತಲೆಮಾರಿನ ಉಪಗ್ರಹ ಕಾರ್ಟೊಸ್ಯಾಟ್-3, ಒಟ್ಟು 1625 ಕೆಜಿ ತೂಕವಿದ್ದು 5 ವರ್ಷಗಳ ಕಾಲ ಕಾರ್ಯ ನಿರ್ವಹಿಸಲಿದೆ….
ಇಸ್ರೋದ ಈ ಹೊಸ ದಾಖಲೆಗೆ ಪ್ರಧಾನಿ ಮೋದಿ ಮೆಚ್ಚುಗೆ ವ್ಯಕ್ತಪಡಿಸಿದ್ದು, ಇನ್ನೂ ಹೆಚ್ಚಿನ ಸಾಧನೆಗಳಿಗೆ ದಾರಿಯಾಗಲಿ ಎಂದು ಶುಭ ಕೋರಿದ್ದಾರೆ.