ನವದೆಹಲಿ: ದೆಹಲಿಸಿಎಂ ಅರವಿಂದ್ ಕೇಜ್ರಿವಾಲ್ ಇದೀಗ ಮತ್ತೊಮ್ಮೆ ಇ.ಡಿ.ವಿಚಾರಣೆಯಿಂದ ದೂರ ಉಳಿದಿದ್ದಾರೆ. ಹಣ ಅಕ್ರಮ ವರ್ಗಾವಣೆ ಪ್ರಕರಣ ಸಂಬಂಧ ಜಾರಿ ನಿರ್ದೇಶನಾಲಯ ಸಮನ್ಸ್ ನೀಡಿ, ಇಂದು ವಿಚಾರಣೆಗೆ ಹಾಜರಾಗುವಂತೆ ಅರವಿಂದ ಕೇಜ್ರಿವಾಲ್ ಅವರಿಗೆ ಸೂಚಿಸಿತ್ತು. ಆದರೆ, ಕೇಜ್ರಿವಾಲ್ ಅವರು ಆರನೇ ಬಾರಿಗೆ ವಿಚಾರಣೆಗೆ ಹಾಜರಾಗದಿರುವುದು ಅಚ್ಚರಿ ಹಾಗೂ ಕುತೂಹಲಕ್ಕೆ ಕಾರಣವಾಗಿದೆ.
ಇ.ಡಿ ಸಮನ್ಸನ್ನು ಕಾನೂನು ಬಾಹಿರ ಎಂದು ಹೇಲಿರುವ ಆಮ್ ಆದ್ಮಿ ಪಕ್ಷ, ಪದೇ ಪದೇ ಸಮನ್ಸ್ ಕಳುಹಿಸುವ ಬದಲು ನ್ಯಾಯಾಲಯದ ವಿಚಾರಣೆ ಮುಗಿಯುವವರೆಗೆ ಕಾಯಲಿ ಎಂದು ಹೇಳಿದೆ. .
ಈ ಹಿಂದೆ, ಸಮನ್ಸ್‌ಗೆ ಸ್ಪಂದಿಸದ ಸಿಎಂ ಕೇಜ್ರಿವಾಲ್ ನಡೆ ಬಗ್ಗೆ ಜಾರಿ ನಿರ್ದೇಶನಾಲಯ ಈಗಾಗಲೇ ಕೋರ್ಟ್ ಮೆಟ್ಟಿಲೇರಿದೆ. ಆ ಅರ್ಜಿ ವಿಚಾರಣೆಗೆ ಬಾಕಿ ಇರುವಾಗ ಆರನೇ ಬಾರಿಗೆ ಕೇಜ್ರಿವಾಲ್ ಅವರಿಗೆ ಸಮನ್ಸ್ ಜಾರಿಯಾಗಿತ್ತು.

























































