ಬೆಂಗಳೂರು: ಬಿಜೆಪಿಯ ಅಧಿಕೃತ ಅಭ್ಯರ್ಥಿ ವಿರುದ್ದ ಬಂಡಾಯವಾಗಿ ಸ್ಪರ್ಧೆಗಿಳಿದಿರುವ ಹಿರಿಯ ನಾಯಕ ಕೆ.ಎಸ್.ಈಶ್ವರಪ್ಪ ವಿರುದ್ದ ಶಿಸ್ತುಕ್ರಮ ಕೈಗೊಳ್ಳುವ ಬಗ್ಗೆ ವರಿಷ್ಠರು ಚಿಂತನೆ ನಡೆಸಿದ್ದಾರೆ. ಈ ಬಗ್ಗೆ ಪಕ್ಷದ ನಾಯಕರು ಪರೋಕ್ಷ ಸಂದೇಶ ರವಾನಿಸಿದ್ದಾರೆ ಎನ್ನಲಾಗಿದೆ.
ಯಡಿಯೂರಪ್ಪ ಪುತ್ರ ರಾಘವೇಂದ್ರ ವಿರುದ್ದ ಸ್ಪರ್ಧೆಗಿಳಿದಿರುವ ಈಶ್ವರಪ್ಪ ಅವರನ್ನು ಮನವೊಲಿಸುವ ಪ್ರಯತ್ನವನ್ನು ಬಿಜೆಪಿ ಹೈಕಮಾಂಡ್ ಕೈಬಿಟ್ಟಿದೆ. ಈ ನಡುವೆ, ಕಾದು ನೋಡುವ ತಂತ್ರಕ್ಕೆ ಮೊರೆ ಹೋಗಿರುವ ಬಿಜೆಪಿ ವರಿಷ್ಠರು, ಏಪ್ರಿಲ್ 22ರೊಳಗೆ ಈಶ್ವರಪ್ಪ ನಾಮಪತ್ರ ವಾಪಸ್ ಪಡೆಯದಿದ್ದರೆ ಅವರನ್ನು ಪಕ್ಷದಿಂದ ಉಚ್ಛಾಟಿಸುವ ಸಾಧ್ಯತೆಗಳಿವೆ ಎಂದು ಪಕ್ಷದ ಮೂಲಗಳು ತಿಳಿಸಿವೆ.


























































