ಬೆಂಗಳೂರು: ರಾಜ್ಯದ ಉನ್ನತ ಶಿಕ್ಷಣ ಹಾಗೂ ವೈದ್ಯಕೀಯ ಪ್ರವೇಶ ಪರೀಕ್ಷೆ ಸಿಇಟಿ ಈ ತಿಂಗಳ 16 ಮತ್ತು 17ರಂದು ನಡೆಯಲಿದೆ.
ಎಂಜಿನಿಯರಿಂಗ್, ವೈದ್ಯಕೀಯ, ಕೃಷಿ, ಪಶುವೈದ್ಯಕೀಯ, ಫಾರ್ಮಸಿ ಮುಂತಾದ ವೃತ್ತಿಪರ ಕೋರ್ಸುಗಳಿಗೆ ಜೂನ್ 16 ಮತ್ತು 17ರಂದು ಸಿಇಟಿ ಮತ್ತು 18ರಂದು ಹೊರನಾಡು ಮತ್ತು ಗಡಿನಾಡು ಕನ್ನಡಿಗ ವಿದ್ಯಾರ್ಥಿಗಳಿಗೆ ಕನ್ನಡ ಭಾಷಾ ಪರೀಕ್ಷೆ ನಡೆಯಲಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಈ ಕುರಿತು ಅವರು ಮಾಹಿತಿ ಹಂಚಿಕೊಂಡರು.
ಪರೀಕ್ಷೆ ಕುರಿತು ಮಹತ್ವದ ವಿವರ ಹೀಗಿದೆ.
- ಜೂನ್ 16ರಂದು ಬೆಳಿಗ್ಗೆ 10.30ರಿಂದ 11.50ರವರೆಗೆ ಜೀವಶಾಸ್ತ್ರ, ಮಧ್ಯಾಹ್ನ 2.30ರಿಂದ 3.50ರವರೆಗೆ ಗಣಿತ ಪರೀಕ್ಷೆಗಳು ನಡೆಯಲಿವೆ.
- ಜೂನ್ 17ರಂದು ಬೆಳಿಗ್ಗೆ ಭೌತಶಾಸ್ತ್ರ ಮತ್ತು ಮಧ್ಯಾಹ್ನ ರಸಾಯನಶಾಸ್ತ್ರ ಪರೀಕ್ಷೆ ನಡೆಯಲಿದೆ.
- ಜೂನ್ 18ರ ಬೆಳಿಗ್ಗೆ ಹೊರನಾಡು ಮತ್ತು ಗಡಿನಾಡು ಕನ್ನಡಿಗ ವಿದ್ಯಾರ್ಥಿಗಳಿಗೆ ಬೆಂಗಳೂರು, ಬೀದರ್, ಬೆಳಗಾವಿ, ವಿಜಯಪುರ, ಬಳ್ಳಾರಿ ಮತ್ತು ಮಂಗಳೂರುಗಳಲ್ಲಿ ಕನ್ನಡ ಭಾಷಾಪರೀಕ್ಷೆ ನಡೆಯಲಿದೆ.
- ಒಟ್ಟು 486 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ.
- ಬೆಂಗಳೂರಿನಲ್ಲೇ 87 ಕೇಂದ್ರಗಳು ಇವೆ.
- ಪರೀಕ್ಷಾ ಪ್ರಕ್ರಿಯೆಯನ್ನೂ ಸಮಗ್ರವಾಗಿ ವಿಡಿಯೋ ಚಿತ್ರೀಕರಣ ಮಾಡಲಾಗುವುದು.


















































