ಬೆಂಗಳೂರು: ಯುದ್ಧಪೀಡಿತ ಉಕ್ರೇನ್‍ನ ಖಾರ್ಕೀವ್ ನಲ್ಲಿ ರಾಜ್ಯದ ಹಾವೇರಿ ಜಿಲ್ಲೆಯ ಚಳಗೇರಿ ಗ್ರಾಮದ ವಿದ್ಯಾರ್ಥಿ ನವೀನ್ ಗ್ಯಾನಗೌಡರ ಅವರು ಮೃತಪಟ್ಟಿರುವ ಸುದ್ದಿ ತಿಳಿದು ದುಃಖವಾಯಿತು ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಕಟೀಲ್ ಅವರು ಸಂತಾಪ ಸೂಚನಾ ಸಂದೇಶದಲ್ಲಿ ತಿಳಿಸಿದ್ದಾರೆ. ನವೀನ್ ಅವರ ಆತ್ಮಕ್ಕೆ ಶಾಂತಿ ಸಿಗಲಿ. ಅವರ ಪೋಷಕರು ಹಾಗೂ ಸಂಬಂಧಿಗಳಿಗೆ ದುಃಖವನ್ನು ಸಹಿಸಿಕೊಳ್ಳುವ ಶಕ್ತಿಯನ್ನು ದೇವರು ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ತಿಳಿಸಿದ್ದಾರೆ.
ಉಕ್ರೇನ್‍ನಲ್ಲಿ ಸಿಲುಕಿರುವ ಭಾರತೀಯರನ್ನು ಸುರಕ್ಷಿತವಾಗಿ ಸ್ವದೇಶಕ್ಕೆ ಕರೆತರಲು ಕೇಂದ್ರ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳುತ್ತಿದೆ. ಆದರೂ ಉಕ್ರೇನ್‍ನಲ್ಲಿರುವ ಭಾರತೀಯರು ಆದಷ್ಟು ಜಾಗ್ರತೆ ವಹಿಸುವುದು ಅತ್ಯಂತ ಅಗತ್ಯವಾಗಿದೆ ಎಂದು ಹೇಳಿದ್ದಾರೆ.
(ಕರುಣಾಕರ ಖಾಸಲೆ)
ಮಾಧ್ಯಮ ಸಂಚಾಲಕರು
ಬಿಜೆಪಿ ಕರ್ನಾಟಕ





















































