ಲಖನೌ: ಉತ್ತರ ಪ್ರದೇಶದ ಉನ್ನಾವೋ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 18 ಮಂದಿ ಸಾವನ್ನಪ್ಪಿದ್ದಾರೆ.
ಲಕ್ನೋ-ಆಗ್ರಾ ಎಕ್ಸ್‌ಪ್ರೆಸ್‌ವೇಯಲ್ಲಿ ಬಸ್ ಹಾಗೂ ಹಾಲಿನ ಟ್ಯಾಂಕರ್ ನಡುವೆ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ. 18 ಪ್ರಯಾಣಿಕರು ಸಾವನ್ನಪ್ಪಿದ್ದು, 20ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಈ ಬಸ್ ಬಿಹಾರದ ಶಿವಗಢದಿಂದ ದೆಹಲಿಗೆ ಹೋಗುತ್ತಿತ್ತೆನ್ನಲಾಗಿದೆ.