ಬೆಂಗಳೂರು: ಉತ್ತರಾಖಂಡ್ಗೆ ಚಾರಣಕ್ಕೆ ತೆರಳಿದ್ದ ಕರ್ನಾಟಕದ 9 ಜನರು ಸಾವನ್ನಪ್ಪಿದ್ದಾರೆ. ಚಾರಣಕ್ಕೆ 21 ಜನರು ಪರಿಸ್ಥಿತಿಯ ಸುಳಿಯಲ್ಲಿ ಸಿಲುಕಿದ್ದು ಈ ಪೈಕಿ ಹಲವರನ್ನು ಪಾರುಮಾಡಲಾಗಿದೆ. ಮಹಾರಾಷ್ಟ್ರದ ಮೂವರು ಸೇರಿದಂತೆ 9 ಮಂದಿ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.
ಉತ್ತರಖಂಡದ ಉತ್ತರಕಾಶಿ ಜಿಲ್ಲೆಯ ಸಹಸ್ತ್ರ ತಾಲ್ ಟ್ರೆಕ್ಕಿಂಗ್ ವೇಳೆ ಕೆಟ್ಟ ಹವಾಮಾನದಿಂದಾಗಿ ಚಾರಣಿಗರು ಸಿಲುಕಿದ್ದರು. ವಾಯುಸೇನೆ ಸುದೀರ್ಘ ರಕ್ಷಣಾ ಕಾರ್ಯಾಚರಣೆ ನಡೆಸಿದೆ.
ಸೇನೆಯ ರಕ್ಷಣಾ ಕಾರ್ಯಾಚರಣೆಯಲ್ಲಿ ಪಾರಾಗಿರುವವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು ಚಿಕಿತ್ಸೆ ನೀಡಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.






















































