ಬೆಂಗಳೂರು: ಉತ್ತರ ಹಾಗೂ ಈಶಾನ್ಯ ಭಾರತದಲ್ಲಿ ಭಾರೀ ಮಳೆಯಾಗುತ್ತಿದ್ದು ಭಾರೀ ಸಾವು ನೋವಿಗೆ ಕಾರಣವಾಗಿದೆ. ಹಿಮಾಚಲ ಪ್ರದೇಶದಲ್ಲಿ ಸರಣಿ ಅವಘಡಗಳಲ್ಲಿ 35ಕ್ಕೂ ಹೆಚ್ಚು ಮಂದಿ ಬಲಿಯಾಗಿದ್ದಾರೆ.
ಕಳೆದ ಕೆಲ ದಿನಗಳಿಂದ ಹಿಮಾಚಲ ಪ್ರದೇಶದಲ್ಲಿ ಸುರಿಯುತ್ತಿರುವ ನಿರಂತರ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತವಾಗಿದೆ.
ಭಾರೀ ಮಳೆಗೆ ಹಿಮಾಚಲ ಪ್ರದೇಶದ ಹಲವೆಡೆ ಭೂಕುಸಿತವಾಗಿದೆ. ರಸ್ತೆಗಳು ಕೊಚ್ಚಿ ಹೋಗುತ್ತಿದ್ದು, ವಾಹನ ಸಂಚಾರ ಏರುಪೇರಾಗಿದೆ.
ಭಾರೀ ಮಳೆ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಹಾಗೂ ಪೊಲೀಸರು ಕಟ್ಟೆಚ್ಚರ ವಹಸಿದ್ದಾರೆ.

























































