ರಾಜ್ಯದ ಹದಿಹರೆಯದ ಹೆಣ್ಣುಮಕ್ಕಳ ಋತುಚಕ್ರದ ನೈರ್ಮಲ್ಯವನ್ನು ಕಾಪಾಡುವ ನಿಟ್ಟಿನಲ್ಲಿ 71.83 ಕೋಟಿ ರೂ ಅನುದಾನ ಬಿಡುಗಡೆ ಮಾಡುವ ಮೂಲಕ ‘ಶುಚಿ’ ಯೋಜನೆಗೆ ಮರುಚಾಲನೆ ನೀಡಲಾಗಿದೆ ಎಂದು ಅರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.
ನಾಡಿನ ಸುಮಾರು 19 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿನಿಯರ ಆರೋಗ್ಯ ರಕ್ಷಣೆಯೇ ನಮ್ಮ ಪ್ರಮುಖ ಗುರಿಯಾಗಿದೆ ಎಂದವರು ತಿಳಿಸಿದ್ದಾರೆ.
ಯೋಜನೆಯ ಹೈಲೈಟ್ಸ್:
- ಶುಚಿ’ ಯೋಜನೆಯ ಪರಿಣಾಮಕಾರಿ ಅನುಷ್ಠಾನಕ್ಕೆ ಹಸಿರು ನಿಶಾನೆ ತೋರಿಸಲಾಗಿದ್ದು, 2,35,74,084 ಸ್ಯಾನಿಟರಿ ಪ್ಯಾಡ್ ಯುನಿಟ್‌ಗಳ ವಿತರಣೆ ಮಾಡಲಾಗುತ್ತಿದೆ.
- ಮುಟ್ಟಿನ ನೈರ್ಮಲ್ಯದಲ್ಲಿ ಹೊಸ ಕ್ರಾಂತಿ ತರಲು 10,38,912 ಸುಸ್ಥಿರ ‘ಮುಟ್ಟಿನ ಕಪ್’ (Menstrual Cups) ವಿತರಿಸಲಾಗುತ್ತಿದೆ.
- ಸರ್ಕಾರಿ ಹಾಗೂ ಅನುದಾನಿತ ಶಾಲೆ, ಕಾಲೇಜು ಮತ್ತು ಹಾಸ್ಟೆಲ್‌ಗಳ ಎಲ್ಲಾ ನೋಂದಾಯಿತ ವಿದ್ಯಾರ್ಥಿನಿಯರಿಗೆ ಇದರ ಸೌಲಭ್ಯ ತಲುಪುತ್ತದೆ.
- 6 ರಿಂದ 8ನೇ ತರಗತಿ ಮಕ್ಕಳಿಗೆ ಸ್ಯಾನಿಟರಿ ಪ್ಯಾಡ್ ಹಾಗೂ 9ನೇ ತರಗತಿಯಿಂದ ಪಿಯುಸಿ ವಿದ್ಯಾರ್ಥಿನಿಯರಿಗೆ ಪ್ಯಾಡ್‌ಗಳ ಜೊತೆಗೆ ಪರಿಸರ ಸ್ನೇಹಿ ಮುಟ್ಟಿನ ಕಪ್ ನೀಡುವ ಮೂಲಕ ಅವರಲ್ಲಿ ಜಾಗೃತಿ ಮತ್ತು ಆತ್ಮವಿಶ್ವಾಸವನ್ನು ಮೂಡಿಸುತ್ತಿದ್ದೇವೆ.
- ಹೆಣ್ಣುಮಕ್ಕಳ ಆತ್ಮವಿಶ್ವಾಸದ ಕಡೆಗೆ” ಎಂಬ ಘೋಷವಾಕ್ಯದೊಂದಿಗೆ ನಮ್ಮ ಸರ್ಕಾರ ಹೆಣ್ಣುಮಕ್ಕಳ ಸಬಲೀಕರಣಕ್ಕೆ ಬದ್ಧವಾಗಿದೆ.
ರಾಜ್ಯದ ಹದಿಹರೆಯದ ಹೆಣ್ಣುಮಕ್ಕಳ ಋತುಚಕ್ರದ ನೈರ್ಮಲ್ಯವನ್ನು ಕಾಪಾಡುವ ನಿಟ್ಟಿನಲ್ಲಿ 71.83 ಕೋಟಿ ರೂ ಅನುದಾನ ಬಿಡುಗಡೆ ಮಾಡುವ ಮೂಲಕ ‘ಶುಚಿ’ ಯೋಜನೆಗೆ ಮರುಚಾಲನೆ ನೀಡಲಾಗಿದೆ.
* ನಾಡಿನ ಸುಮಾರು 19 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿನಿಯರ ಆರೋಗ್ಯ ರಕ್ಷಣೆಯೇ ನಮ್ಮ ಪ್ರಮುಖ ಗುರಿಯಾಗಿದೆ.
* ವ್ಯಾಪಕ ವಿತರಣೆ: ‘ಶುಚಿ’ ಯೋಜನೆಯ ಪರಿಣಾಮಕಾರಿ… pic.twitter.com/d9XKGJBZM5
— Dinesh Gundu Rao/ದಿನೇಶ್ ಗುಂಡೂರಾವ್ (@dineshgrao) January 9, 2026



















































