ಕಾಸರಗೋಡು: ನಾಡಿನ ಹಿರಿಯ ಯತಿ, ಜಗದ್ಗುರು ಶಂಕರಾಚಾರ್ಯ ಸಂಸ್ಥಾನಂ ಎಡನೀರು ಮಠಾಧೀಶರಾದ ಶ್ರೀ ಕೇಶವಾನಂದ ಭಾರತೀ ಸ್ವಾಮೀಜಿಯವರು ವಿಧಿವಶರಾಗಿದ್ದಾರೆ.
ಕಳೆದ ವಾರವಷ್ಟೇ ಚಾತುರ್ಮಾಸ್ಯವನ್ನು ಪೂರೈಸಿದ್ದ ಶ್ರೀಗಳು ಕಳೆದ ಕೆಲವು ದಿನಗಳಿಂದ ಅಲ್ಪ ಅಸೌಖ್ಯದಲ್ಲಿದ್ದರು. ಶನಿವಾರ ತಡರಾತ್ರಿ ಸುಮಾರು 12.45ರ ಸುಮಾರಿಗೆ ಶ್ರೀಗಳು ವಿಧಿವಶರಾದರು. ಅವರಿಗೆ 79 ವರ್ಷ ವಯಸ್ಸಾಗಿತ್ತು.
ಯಕ್ಷಗಾನ ಬಗ್ಗೆ ಅತೀವ ಆಸಕ್ತಿ ಹೊಂದಿದ್ದ ಸ್ವಾಮೀಜಿ ಯಕ್ಷಗಾನ ಮೇಳವನ್ನು ಮುನ್ನಡೆಸುತ್ತಾ ಸ್ವತಃ ಭಾಗವತಿಕೆಯನ್ನೂ ನಡೆಸುತ್ತಿದ್ದರು. ಪ್ರತೀ ವರ್ಷ ಯಕ್ಷಗಾನ ಸಪ್ತಾಹ, ತಾಳಮದ್ದಳೆ ಕೂಟಗಳನ್ನು ನಡೆಸುತ್ತಿದ್ದರು.