ನವದೆಹಲಿ: ಲೋಕಸಭಾ ಚುನಾವಣೆಯಲ್ಲಿ ಸರಳ ಬಹುಮತ ಪಡೆದಿರುವ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್‌ಡಿಎ) ನಾಯಕನಾಗಿ ನರೇಂದ್ರ ಮೋದಿ ಅವರು ಆಯ್ಕೆಯಾಗಿದ್ದಾರೆ.
ಲೋಕಸಭಾ ಚುನಾವಣೆಯ ಪರಿಪೂರ್ಣ ಫಲಿತಾಂಶ ಹೊರಬಿದ್ದ ಹಿನ್ನೆಲೆಯಲ್ಲಿ ಸಭೆ ಸೇರಿದ ಎನ್‌ಡಿಎ ಮುಖಂಡರು18ನೇ ಲೋಕಸಭೆಯ ನಾಯಕನ್ನಾಗಿ ನರೇಂದ್ರ ಮೋದಿಯವರನ್ನು ಆಯ್ಕೆ ಮಾಡಿದ್ದಾರೆ. ಶುಕ್ರವಾರ ಅಧಿಕೃತವಾಗಿ ತೀರ್ಮಾನ ಕೈಗೊಂಡ ಎನ್ಡಿಎಯ ಎಲ್ಲಾ ಸಂಸದರು ಮೋದಿಯನ್ನು ತಮ್ಮ ನಾಯಕನನ್ನಾಗಿ ಆಯ್ಕೆ ಮಾಡಿದ್ದಾರೆ ಎಂದು ಬಿಜೆಪಿ ನಾಯಕರು ತಿಳಿಸಿದ್ದಾರೆ.
ಈ ಬೆಳವಣಿಗೆ ನಂತರ ಎನ್‌ಡಿಎ ನಿಯೋಗ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿಯಾಗಿ ನರೇಂದ್ರ ಮೋದಿ ನೇತೃತ್ವದಲ್ಲಿ ಸರ್ಕಾರ ರಚಿಸಲು ಅವಕಾಶ ಕೋರಲಿದೆ ಎನ್ಬಲಾಗಿದೆ.






















































