ಬೆಂಗಳೂರು: ಉಚ್ಛ ನ್ಯಾಯಾಲಯದ ಎ.ಸಿ.ಬಿ ರದ್ದು ಗೊಳಿಸಿ ತೀರ್ಪು ನೀಡಿದೆ. ನಮ್ಮ ಪಕ್ಷದ ಪ್ರಣಾಳಿಕೆಯಲ್ಲಿ ನೀಡಲಾಗಿರುವ ಭರವಸೆಯನ್ನು ಗಮನದಲ್ಲಿಟ್ಟುಕೊಂಡು, ಪ್ರಣಾಳಿಕೆ ಆಧಾರಿಸಿಯೇ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡುತ್ತಾ ಹೈಕೋರ್ಟ್ ಅಭಿಪ್ರಾಯ ಕುರಿತಂತೆ ಪ್ರತಿಕ್ರಿಯಿಸಿದರು.
ತೀರ್ಪಿನ ಮೂಲ ಪ್ರತಿ ಪಡೆದು ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ಮಾಡಲಾಗುವುದು ಎಂದು ಅವರು ತಿಳಿಸಿದರು..







































































