ಬೆಂಗಳೂರು: ಸಚಿವ ಸ್ಥಾನ ಆಕಾಂಕ್ಷಿಯಾಗಿದ್ದ ಯಲಹಂಕ ಶಾಸಕ ಎಸ್.ಆರ್ ವಿಶ್ವನಾಥ್ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಯಾಗಿ ನೇಮಕಗೊಂಡಿದ್ದಾರೆ.
ಮುಖ್ಯಮಂತ್ರಿಗಳ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ಎಸ್.ಆರ್ ವಿಶ್ವನಾಥ್, ಸಮ್ಮಿಶ್ರ ಸರ್ಕಾರ ಪತನಕ್ಕೂ ಮುನ್ನ ಅತೃಪ್ತ ಶಾಸಕರನ್ನು ರೆಸಾರ್ಟ್ ನಲ್ಲಿಟ್ಟು ಪರಿಸ್ಥಿತಿ ನಿಭಾಯಿಸಿದ್ದರು. ಈಗ ಅವರನ್ನು ಸಂಪುಟ ದರ್ಜೆಯ ಸ್ಥಾನಮಾನ ಹೊಂದಿರುವ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಯಾಗಿ ಬಿ.ಎಸ್ ಯಡಿಯೂರಪ್ಪ ನೇಮಕ ಮಾಡಿಕೊಂಡಿದ್ದಾರೆ. ಈ ಕುರಿತು ಅಧಿಕೃತ ಘೋಷಣೆಯಷ್ಟೇ ಬಾಕಿ ಇದೆ.