ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಉಜಿರೆ ಎಸ್ ಡಿಎಂ ಎಜ್ಯುಕೇಶನ್ ಸೊಸೈಟಿ ಕಾರ್ಯದರ್ಶಿ ಡಾ. ಯಶೋವರ್ಮ ಅವರು ವಿಧಿವಶರಾಗಿದ್ದಾರೆ.
ಡಾ. ಯಶೋವರ್ಮ ಅವರ ನಿಧನಕ್ಕೆ
ನಳಿನ್‍ಕುಮಾರ್ ಕಟೀಲ್ ಸಂತಾಪ ತೀವ್ರ ಸಂತಾಪ ಸೂಚಿಸಿದ್ದಾರೆ.
ಉಜಿರೆ ಎಸ್.ಡಿ.ಎಂ ಪದವಿ ಕಾಲೇಜಿನ ಪ್ರಾಚಾರ್ಯರಾಗಿ ಹಲವು ವರ್ಷ ಯಶೋವರ್ಮ ಅವರು ಸೇವೆ ಸಲ್ಲಿಸಿದ್ದರು. ಬೆಳ್ತಂಗಡಿ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷರಾಗಿ ಹಲವಾರು ಸಮ್ಮೇಳನಗಳನ್ನು ನಡೆಸಿದ್ದರು ಎಂದು ನಳಿನ್ ಕುಮಾರ್ ನೆನಪಿಸಿದ್ದಾರೆ.
ಮೃತರ ಆತ್ಮಕ್ಕೆ ಶಾಂತಿ ಲಭಿಸಲಿ. ದುಃಖತಪ್ತ ಕುಟುಂಬ, ಶಿಷ್ಯರು ಹಾಗೂ ಅಭಿಮಾನಿಗಳಿಗೆ ಈ ನೋವನ್ನು ಸಹಿಸುವ ಶಕ್ತಿಯನ್ನು ಪರಮಾತ್ಮನು ನೀಡಲಿ ಎಂದು ಅವರು ಪ್ರಾರ್ಥಿಸಿದ್ದಾರೆ.






































































