ಹ್ಯಾಂಗ್‌ಝೌ: 2023ರ ಏಷ್ಯನ್ ಗೇಮ್ಸ್‌ನಲ್ಲಿ ಭಾರತದ ಪದಕ ಬೇಟೆ ಮುಂದುವರಿದಿದೆ. ಜಾವೆಲಿನ್ ಥ್ರೋ ಪುರುಷರ ವಿಭಾಗದಲ್ಲಿ ಭಾರತಕ್ಕೆ ಎರಡು ಪದಕ ಸಿಕ್ಕಿದ್ದು, ನೀರಜ್ ಚೋಪ್ರಾ ಚಿನ್ನದ ಪದಕ ಗೆದ್ದರೆ ಕಿಶೋರ್ ಜೆನಾ ಬೆಳ್ಳಿ ಪದಕ ಗೆದ್ದಿದ್ದಾರೆ. ಇನ್ನೊಂದೆಡೆ ಮಹಿಳೆಯರ 4X400M ರಿಲೇ ಪಂದ್ಯದಲ್ಲಿ ಭಾರತಕ್ಕೆ ಬೆಳ್ಳಿ ಪದಕ ಸಿಕ್ಕಿದೆ. ವಿತ್ಯಾ ರಾಮರಾಜ್, ಐಶ್ವರ್ಯ ಕೈಲಾಶ್ ಮಿಶ್ರಾ, ಪ್ರಾಚಿ, ಶುಭಾ ವೆಂಕಟೇಶನ್ ತಂಡ ಫೈನಲ್‌ನಲ್ಲಿ 2:03.75 ಟೈಮಿಂಗ್ ನೊಂದಿಗೆ ಎರಡನೇ ಸ್ಥಾನ ಪಡೆದು ಭಾರತಕ್ಕೆ ಪದಕ ತಂದುಕೊಟ್ಟಿದೆ.
© 2020 Udaya News – Powered by RajasDigital.