ಬೆಂಗಳೂರು: ಮಾರ್ಚ್ ತಿಂಗಳಲ್ಲಿ ನಡೆದ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಏಪ್ರಿಲ್ 21 ರಂದು ಪ್ರಕಟವಾಗಲಿದೆ.
ಶುಕ್ರವಾರ ಬೆಳಗ್ಗೆ 10 ಗಂಟೆಗೆ ಫಲಿತಾಂಶ ಪ್ರಕಟವಾಗಲಿದ್ದು, ಬೆಳಗ್ಗೆ 11 ಗಂಟೆಯ ನಂತರ ಇಲಾಖೆಯ ವೆಬ್ಸೈಟ್ https://karresults.nic.in ನಲ್ಲಿ ಫಲಿತಾಂಶ ಲಭ್ಯವಾಗಲಿದೆ. ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಮತ್ತು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಅಧಿಕಾರಿಗಳು ಫಲಿತಾಂಶ ಪ್ರಕಟಮಾಡಲಿದ್ದಾರೆ ಎಂದು ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ತಿಳಿಸಿದೆ.