ಕರ್ನಾಟಕದಿಂದ ಐವರಿಗೆ ಮೋದಿ ಸಂಪುಟದಲ್ಲಿ ಸ್ಥಾನ ಸಿಕ್ಲಿದೆ. ಎನ್‌ಡಿಎ ಮಿತ್ರಕೂಟಕ್ಕೆ ಸೇರಿಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ದಕ್ಷಿಣ ಭಾರತದಲ್ಲಿ ಕಮಾಲ್ ಪ್ರದರ್ಶಿಸಿರುವ ಜೆಡಿಎಸ್ ಸಂಸದ ಕುಮಾರಸ್ವಾಮಿ ಅವರಿಗೆ ಮೋದಿ ಅವರ ಮೂರನೇ ಸರ್ಕಾರದಲ್ಲಿ ಮಂತ್ರಿ ಸ್ಥಾನ ಸಿಕ್ಕಿದೆ.
ಇದೇ ವೇಳೆ, ಧಾರವಾಡ ಸಂಸದ ಪ್ರಲ್ಹಾದ್ ಜೋಷಿ ಅವರೂ ಸಂಪುಟ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ರಾಜ್ಯಸಭೆಯಲ್ಲಿ ಕರ್ನಾಟಕವನ್ನು ಪ್ರತಿನಿಧಿಸಿರುವ ನಿರ್ಮಲಾ ಸೀತಾರಾಮನ್ ಅವರೂ ಸಂಪುಟದಲ್ಲಿ ಸದಸ್ಯರಾಗಿದ್ದಾರೆ.
ತುಮಕೂರು ಕ್ಷೇತ್ರದಿಂದ ಸಂಸತ್ತಿಗೆ ಆಯ್ಕೆಯಾಗಿರುವ ವಿ.ಸೋಮಣ್ಣ ಅವರು ಸಚಿವರಾಗಿ ಪದಗ್ರಹಣ ಮಾಡಿದರು.
ಇದೇ ವೇಳೆ, ಬೆಂಗಳೂರು ಉತ್ತರ ಸಂಸದೆ ಶೋಭಾ ಕರಂದ್ಲಾಜೆ ಅವರು ಈ ಬಾರಿಯೂ ಮೋದಿ ಸಂಪುಟದಲ್ಲಿ ಮತ್ತೊಮ್ಮೆ ಸಚಿವೆಯಾಗಿದ್ದಾರೆ.