ನವದೆಹಲಿ: ಒಂದು ದೇಶ, ಒಂದು ಚುನಾವಣೆ ಕುರಿತಂತೆ ಸಮೀಕ್ಷೆಗಾಗಿ ಕೇಂದ್ರ ಸರ್ಕಾರ ರಚಿಸಿದ್ದ ಮಾಜಿ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಸಮಿತಿ ಇಂದು ವರದಿ ಸಲ್ಲಿಸಿದೆ.
ರಾಷ್ಟ್ರಪತಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿದ ರಾಮ್ ನಾಥ್ ಕೋವಿಂದ್ ಅವರನ್ನೊಳಗೊಂಡ ಸಮಿತಿ ಈ ವರದಿಯನ್ನು ಸಲ್ಲಸಿದೆ.
ದೇಶದಲ್ಲಿ ಸಂಸತ್ ಹಾಗೂ ವಿವಿಧ ರಾಜ್ಯಗಳ ವಿಧಾನಸಭೆಗಳಿಗೆ ಏಕಕಾಲದಲ್ಲಿ ಚುನಾವಣೆಗಳನ್ನು ನಡೆಸಲು ಸಂವಿಧಾನದ ವಿಧಿಗಳಲ್ಲಿ ತಿದ್ದುಪಡಿ ಮಾಡುವ ಸಂಬಂಧ ಅಧ್ಯಯನ ನಡೆಸಲು ಕೇಂದ್ರ ಸರ್ಕಾರ ಈ ಸಮಿತಿಯನ್ನು ರಚಿಸಿತ್ತು. ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ಈ ಸಮಿತಿಯನ್ನು ರಚಿಸಲಾಗಿತ್ತು.























































