ಮೈಸೂರು; ಅಶ್ಲೀಲ ವೀಡಿಯೋ ಪ್ರಕರಣವು ರಾಜ್ಯ ರಾಜಕಾರಣದಲ್ಲಿ ಭಾರೀ ಸದ್ಸು ಮಾಡುತ್ತಿರುವಂತೆಯೇ ಜೆಡಿಎಸ್ ಶಾಸಕ ಹೆಚ್.ಡಿ.ರೇವಣ್ಣ ಅವರು ಜಾಮೀನಿಗಾಗಿ ಕೋರ್ಟ್ ಮೊರೆ ಹೋಗಿದ್ದಾರೆ. ಅದಾಗಲೇ ಮತ್ತೊಂದು ಪ್ರಕರಣ ದಾಖಲಾಗಿದೆ.
ಅಶ್ಲೀಲ ವೀಡಿಯೋಗಳು ಬಹಿರಂಗವಾದ ನಂತರ ತನ್ನ ತಾಯಿ ನಾಪತ್ತೆಯಾಗಿದ್ದಾರೆ ಎಂದು ವ್ಯಕ್ತಿಯೊಬ್ಬರು ಮೈಸೂರಿನಲ್ಲಿ
ಪೊಲೀಸರಿಗೆ ದೂರು ನೀಡಿದ್ದಾರೆ. ಕೆ.ಆರ್.ನಗರ ಠಾಣೆಯಲ್ಲಿ ಈ ದೂರು ದಾಖಲಾಗಿದ್ದು, ರೇವಣ್ಣ ಬಗ್ಗೆ ದೂರುದಾರು ಅನುಮಾನ ವ್ಯಕ್ತಪಡಿಸಿದ್ದಾರೆ. ಪ್ರಕರಣ ದಾಖಲಿಸಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ.