ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಉಬುಂಟು- ಮಹಿಳಾ ಉದ್ಯಮಿಗಳ ಸಂಘದ ವತಿಯಿಂದ ಆಯೋಜಿಸಿದ್ದ ಅಂತರರಾಷ್ಟ್ರೀಯ ಮಹಿಳಾ ಉದ್ಯಮಿಗಳ ದಿನಾಚರಣೆ: ‘ಒಗ್ಗಟ್ಟಾಗಿ ಬೆಳೆಯೋಣ’ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಈ ವೇಳೆ ಮಾತನಾಡಿದ ಸಿಎಂ, ಆರ್ಥಿಕವಾಗಿ ಮಹಿಳಾ ಉದ್ಯಮಿಗಳಿಗೆ ಸರ್ಕಾರದಿಂದ ನೆರವು ನೀಡಲು ಹಳ್ಳಿಗಳಲ್ಲಿರುವ ಮಹಿಳಾ ಸ್ವಸಹಾಯ ಸಂಘ ಮಾದರಿ ಮಹಿಳಾ ಉದ್ಯಮಿಗಳಿಗೆ ಪ್ರತ್ಯೇಕ ಸಂಘ ತೆರೆಯುವುದಾಗಿ ಘೋಷಿಸಿದರು. ಆರ್ಥಿಕವಾಗಿ ಮಹಿಳಾ ಉದ್ಯಮಿಗಳಿಗೆ ಸರ್ಕಾರದಿಂದ ನೆರವು ನೀಡಲು ಹೊಸ ಸಂಘ ಸ್ಥಾಪನೆ ಮಾಡಲಾಗುವುದು. ಈ ಬಗ್ಗೆ ಅಧಿಕಾರಿಗಳಿಗೆ ಸೂಚಿಸುವುದಾಗಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು. ದೃಷ್ಟಿಚೇತನ, ವಿಕಲಚೇತನ ಮಹಿಳೆಯರಿಗೆ ವಿಶೇಷ ಯೋಜನೆ ಹಮ್ಮಿಕೊಳ್ಳಲಾಗುವುದು ಎಂದೂ ಅವರು ತಿಳಿಸಿದರು.
ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ, ನಿವೃತ್ತ ಮುಖ್ಯ ಕಾರ್ಯದರ್ಶಿ ಹಾಗೂ ಉಬುಂಟು ಸಂಸ್ಥಾಪಕರಾದ ಕೆ.ರತ್ನಪ್ರಭಾ, ಹಾಗೂ ಸಂಘದ ಪದಾಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.