ಕತಾರ್ (Qatar): ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಸಂಘರ್ಷ ತೀವ್ರಗೊಳ್ಳುತ್ತಿದ್ದು, ಇರಾನ್ (Iran) ಇದೀಗ ಕತಾರ್ನ ಇಂಧನ ಮೂಲಸೌಕರ್ಯಗಳನ್ನು ಗುರಿಯಾಗಿಸಿ ದಾಳಿ ನಡೆಸಿರುವುದು ಆತಂಕ ಹೆಚ್ಚಿಸಿದೆ. ಅಮೆರಿಕ (United States)–ಇಸ್ರೇಲ್ (Israel) ಮೈತ್ರಿ ಪಡೆಗಳ ದಾಳಿಗೆ ಪ್ರತೀಕಾರವಾಗಿ ಈ ಕ್ರಮ ಕೈಗೊಂಡಿದೆ ಎಂದು ತಿಳಿದುಬಂದಿದೆ.
ಇದುವರೆಗೆ ಯುಎಸ್ ಮಿಲಿಟರಿ ನೆಲೆಗಳನ್ನು ಮಾತ್ರ ಗುರಿಯಾಗಿಸಿಕೊಂಡಿದ್ದ ಇರಾನ್, ಇದೀಗ ಒಂದು ಹೆಜ್ಜೆ ಮುಂದೆ ಹೋಗಿ ಪಶ್ಚಿಮ ಏಷ್ಯಾದ ಇಂಧನ ಮೂಲಸೌಕರ್ಯಗಳ ಮೇಲೆ ದಾಳಿ ಆರಂಭಿಸಿದೆ. ಕತಾರ್ನ ರಾಸ್ ಲಫಾನ್ ಕೈಗಾರಿಕಾ ನಗರ (Ras Laffan Industrial City)ದ ಅನಿಲ ಸೌಲಭ್ಯಗಳ ಮೇಲೆ ಕ್ಷಿಪಣಿ ದಾಳಿ ನಡೆದಿರುವುದು ಜಾಗತಿಕ ಮಾರುಕಟ್ಟೆಗೆ ದೊಡ್ಡ ಆಘಾತ ತಂದಿದೆ.
🚨💥🚨 L'AÉROPORT INTERNATIONAL DE DUBAÏ EST EN FEU !
❗Plus d'infos ici 👇🏻https://t.co/7Gq1QvshBR pic.twitter.com/Ybm5v96PeO
— Philippe T (@brain_stimulus) March 18, 2026
ಈ ಬೆಳವಣಿಗೆಯ ಪರಿಣಾಮವಾಗಿ ಅನಿಲ ಮತ್ತು ತೈಲ ಬೆಲೆಗಳು ಗಗನಕ್ಕೇರುವ ಸಾಧ್ಯತೆ ಇದೆ. ಇರಾನ್ ತನ್ನ ಅನಿಲ ಘಟಕಗಳ ಮೇಲೆ ನಡೆದ ದಾಳಿಗೆ ಸೇಡು ತೀರಿಸಿಕೊಳ್ಳುವ ನಿಟ್ಟಿನಲ್ಲಿ ಕತಾರ್ ಸೇರಿದಂತೆ ಸೌದಿ ಅರೇಬಿಯಾ (Saudi Arabia) ಮತ್ತು ಯುನೈಟೆಡ್ ಅರಬ್ ಎಮಿರೇಟ್ಸ್ (United Arab Emirates)ನಲ್ಲಿನ ಇಂಧನ ಮೂಲಸೌಕರ್ಯಗಳನ್ನೂ ಗುರಿಯಾಗಿಸಬಹುದು ಎಂದು ಎಚ್ಚರಿಕೆ ನೀಡಿದೆ.
ಪರ್ಷಿಯನ್ ಕೊಲ್ಲಿಯಲ್ಲಿ ಇರುವ ಸೌತ್ ಪಾರ್ಸ್ ಅನಿಲ ಘಟಕದ ಮೇಲೆ ಇಸ್ರೇಲ್ ದಾಳಿ ನಡೆಸಿದ ನಂತರ ಪರಿಸ್ಥಿತಿ ಮತ್ತಷ್ಟು ತೀವ್ರಗೊಂಡಿದೆ. ಇದರಿಂದ ಗಲ್ಫ್ ಪ್ರದೇಶದಲ್ಲಿ ಉದ್ವಿಗ್ನತೆ ಹೆಚ್ಚಿದ್ದು, ಜಾಗತಿಕ ಇಂಧನ ಸರಬರಾಜಿನ ಮೇಲೂ ಪರಿಣಾಮ ಬೀರುವ ಆತಂಕ ವ್ಯಕ್ತವಾಗಿದೆ.
ಭಾರತಕ್ಕೂ ಈ ಬೆಳವಣಿಗೆ ನೇರ ಪರಿಣಾಮ ಬೀರುವ ಸಾಧ್ಯತೆ ಇದೆ. ಭಾರತ (India) ತನ್ನ ಎಲ್ಎನ್ಜಿ ಅಗತ್ಯಗಳ ಬಹುಪಾಲನ್ನು ಕತಾರ್ನಿಂದಲೇ ಆಮದು ಮಾಡಿಕೊಳ್ಳುತ್ತದೆ. ವರ್ಷಕ್ಕೆ ಸುಮಾರು 27 ಮಿಲಿಯನ್ ಟನ್ ಎಲ್ಎನ್ಜಿ ಆಮದು ಮಾಡಿಕೊಳ್ಳುವ ಭಾರತಕ್ಕೆ, ಅದರಲ್ಲಿ ಸುಮಾರು 47% ಕತಾರ್ನಿಂದಲೇ ಬರುತ್ತದೆ.
ಹಾರ್ಮುಜ್ ಜಲಸಂಧಿ (Strait of Hormuz)ಯಲ್ಲಿ ಉದ್ವಿಗ್ನತೆ ಹೆಚ್ಚಿರುವ ಹಿನ್ನೆಲೆ, ಭಾರತೀಯ ಅನಿಲ ಹಡಗುಗಳು ಸಮುದ್ರದಲ್ಲೇ ಸಿಲುಕಿಕೊಂಡಿರುವುದಾಗಿ ವರದಿಯಾಗಿದೆ. ಈ ಹಿನ್ನೆಲೆಯಲ್ಲಿ ಭಾರತವು ಇರಾನ್ನೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ಹಡಗುಗಳನ್ನು ಸುರಕ್ಷಿತವಾಗಿ ಹಿಂದಿರುಗಿಸುವ ಪ್ರಯತ್ನ ನಡೆಸುತ್ತಿದೆ.
ರಾಸ್ ಲಫಾನ್ ಘಟಕ ಸಂಪೂರ್ಣ ಅಸ್ತವ್ಯಸ್ತಗೊಂಡರೆ, ಭಾರತವು ಇತರ ದೇಶಗಳಿಂದ ದುಬಾರಿ ದರದಲ್ಲಿ ಅನಿಲವನ್ನು ಖರೀದಿಸಬೇಕಾದ ಪರಿಸ್ಥಿತಿ ಎದುರಾಗಬಹುದು. ಇದರಿಂದ ದೇಶೀಯ ಇಂಧನ ಬೆಲೆಗಳ ಮೇಲೂ ಒತ್ತಡ ಹೆಚ್ಚುವ ಸಾಧ್ಯತೆ ಇದೆ.


















































