ಬೆಂಗಳೂರು: ರಾಜ್ಯದ ಸಚಿವ ಉಮೇಶ್ ಕತ್ತಿ ಅವರ ಅಕಾಲಿಕ ನಿಧನದ ಕಾರಣ, ದೊಡ್ಡಬಳ್ಳಾಪುರದಲ್ಲಿ ಸೆಪ್ಟೆಂಬರ್ 8ರಂದು ನಡೆಸಲುದ್ದೇಶಿಸಿದ್ದ ‘ಜನೋತ್ಸವ’ವನ್ನು ಸೆಪ್ಟೆಂಬರ್ 11ಕ್ಕೆ ಮುಂದೂಡಲಾಗಿದೆ ಎಂದು ಪಕ್ಷದ ರಾಜ್ಯ ಉಪಾಧ್ಯಕ್ಷ ನಿರ್ಮಲ್ ಕುಮಾರ್ ಸುರಾಣಾ ಅವರು ತಿಳಿಸಿದ್ದಾರೆ.
ಈ ಕುರಿತಂತೆ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಕೂಡಾ ಟ್ವೀಟ್ ಮಾಡಿ ಮಾಹಿತಿ ಹಂಚಿಕೊಂಡಿದ್ದಾರೆ. ಸಚಿವರಾದ ಉಮೇಶ್ ಕತ್ತಿಯವರ ಅಕಾಲಿಕ ನಿಧನದಿಂದ ರಾಜ್ಯದಲ್ಲಿ 3 ದಿನ ಶೋಕಾಚರಣೆಯನ್ನು ರಾಜ್ಯ ಸರಕಾರ ಘೋಷಿಸಿದೆ. ಇದರಿಂದಾಗಿ ಸೆಪ್ಟೆಂಬರ್ 8 ರಂದು ದೊಡ್ಡಬಳ್ಳಾಪುರದಲ್ಲಿ ನಡೆಯಬೇಕಿದ್ದ ಜನೋತ್ಸವ ಸಮಾವೇಶವನ್ನು ಸೆಪ್ಟೆಂಬರ್ 11 ಭಾನುವಾರಕ್ಕೆ ಮುಂದೂಡಲಾಗಿದೆ. ಕಾರ್ಯಕರ್ತ ಬಂಧುಗಳು ಸಹಕರಿಸಬೇಕೆಂದು ನಳಿನ್ ಕುಮಾರ್ ಕಟೀಲ್ ವಿನಂತಿಸಿಕೊಂಡಿದ್ದಾರೆ.
https://twitter.com/nalinkateel/status/1567470448103034882?t=Rq-IbESkcwzR_-wunfkn3Q&s=19