ಗಾಜಾ: ಕದನ ವಿರಾಮ ಉಲ್ಲಂಘನೆಯಿಂದಾಗಿ ಪಶಿಮ ದಂಡೆ ಮತ್ತೊಮ್ಮೆ ಪ್ರಕ್ಷುಬ್ಧಗೊಂಡಿದೆ. ಉತ್ತರ ಮತ್ತು ಮಧ್ಯ ಗಾಜಾದಾದ್ಯಂತ ಇಸ್ರೇಲ್ ನಡೆಸಿದ ಡ್ರೋನ್, ಕ್ಷಿಪಣಿ ದಾಳಿಯಲ್ಲಿ ಕನಿಷ್ಠ 24 ಪ್ಯಾಲೆಸ್ಟೀನಿಯನ್ನರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿವೆ.
ಇಸ್ರೇಲ್ ವೈಮಾನಿಕ ದಾಳಿಯಲ್ಲಿ ಭಾರೀ ಮಾರಣಹೋಮವೇ ನಡೆದಿದ್ದು ಜೊತೆಗೆ ಮಕ್ಕಳು ಸೇರಿದಂತೆ 54 ಜನರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕಳೆದ, ಅಕ್ಟೋಬರ್ ನಲ್ಲಿ ಅಮೆರಿಕ ಮಧ್ಯಸ್ಥಿಕೆಯಲ್ಲಿ ಇಸ್ರೇಲ್ ಮತ್ತು ಹಮಾಸ್ ನಡುವೆ ಕದನ ವಿರಾಮ ಜಾರಿಗೆ ಬಂದಿತ್ತು. ಆದರೆ ಭಯೋತ್ಪಾದಕ” ದಾಳಿಯ ಪರಿಣಾಮವಾಗಿ ತಾನು ವೈಮಾನಿಕ ದಾಳಿ ಮಾಡಬೇಕಾಯಿತು ಎಂದು ಇಸ್ರೇಲ್ ಮಿಲಿಟರಿ ಹೇಳಿದೆ.




















































