ಬೆಂಗಳೂರು: ಕನ್ನಡಿಗರಿಗೆ ಬರ ಪರಿಹಾರ, ಅಭಿವೃದ್ಧಿಗೆ ಅನುದಾನ ಕೊಡಲು ಖಜಾನೆ ಖಾಲಿ ಮಾಡಿ ಹಣವಿಲ್ಲ ಎಂದು ಕೂತಿರುವ ಕಾಂಗ್ರೆಸ್ ಸರ್ಕಾರ, ಕಲೆಕ್ಷನ್ ಏಜೆಂಟ್ ಸುರ್ಜೇವಾಲಾ ಅವರ ಚುನಾವಣಾ ಪ್ರಚಾರಕ್ಕೆ ಸುತ್ತಾಡಲು ಸ್ಪೆಷಲ್ ಫ್ಲೈಟ್‌ಗಳ ವ್ಯವಸ್ಥೆಯನ್ನೇ ಮಾಡಿದೆ ಎಂದು ಬಿಜೆಪಿ ಆರೋಪಿಸಿದೆ.
ಈ ಕುರಿತಂತೆ ಟ್ವೀಟ್ ಮಾಡಿ ಆರೋಪಿಸಿರುವ ಬಿಜೆಪಿ, ATM ಸರ್ಕಾರ ಕೊಟ್ಟು ಕಳಿಸುವ ಲೂಟಿ ಹಣವನ್ನು ಚುನಾವಣೆಗಾಗಿ ದೇಶದ ತುಂಬಾ ತೆಗೆದುಕೊಂಡು ಹೋಗಿ ಹಂಚುವ ಜವಾಬ್ದಾರಿಯನ್ನೂ ನೀಡಲಾಗಿದೆಯೇ? ಎಂದು ಪ್ರಶ್ನಿಸಿದೆ.
ಕನ್ನಡಿಗರು ಕುಡಿಯಲು ಹನಿ ನೀರಿಲ್ಲದೆ ಸತ್ತರೂ ಸಿದ್ದರಾಮಯ್ಯ ಸರ್ಕಾರಕ್ಕೆ ಚಿಂತೆ ಇಲ್ಲ. ಆದರೆ, ಹೈಕಮಾಂಡ್ ಹೇಳಿದಂತೆ ಕೇಳಿಕೊಂಡು ಕಪ್ಪ ಕಾಣಿಕೆ ಸಲ್ಲಿಸುತ್ತಾ ಅವರ ಸೇವೆ ಮಾಡುತ್ತಾ ಕುರ್ಚಿ ಉಳಿಸಿಕೊಳ್ಳುವುದೇ ಸಿದ್ದರಾಮಯ್ಯ ಅವರ ಗುರಿ ಎಂದು ಟೀಕಿಸಿದೆ.
ಕನ್ನಡಿಗರಿಗೆ ಬರ ಪರಿಹಾರ, ಅಭಿವೃದ್ಧಿಗೆ ಅನುದಾನ ಕೊಡಲು ಖಜಾನೆ ಖಾಲಿ ಮಾಡಿ ಹಣವಿಲ್ಲ ಎಂದು ಕೂತಿರುವ @INCKarnataka ಸರ್ಕಾರ, ಕಲೆಕ್ಷನ್ ಏಜೆಂಟ್ ಸುರ್ಜೇವಾಲಾ ಅವರ ಚುನಾವಣಾ ಪ್ರಚಾರಕ್ಕೆ ಸುತ್ತಾಡಲು ಸ್ಪೆಷಲ್ ಫ್ಲೈಟ್‌ಗಳ ವ್ಯವಸ್ಥೆಯನ್ನೇ ಮಾಡಿದೆ.#ATMSarkara ಕೊಟ್ಟು ಕಳಿಸುವ ಲೂಟಿ ಹಣವನ್ನು ಚುನಾವಣೆಗಾಗಿ ದೇಶದ ತುಂಬಾ… pic.twitter.com/ZaWl4kpElg
— BJP Karnataka (@BJP4Karnataka) April 27, 2024