ಬೆಂಗಳೂರು: ರಾಜ್ಯಾದ್ಯಂತ ಪ್ರಭಲಗೊಳ್ಳುತ್ತಿರುವ ಕಬ್ಬು ಬೆಳೆಗಾರರ ಹೋರಾಟವನ್ನು ಮನಗಂಡು ರಾಜ್ಯ ಸರ್ಕಾರ ಶನಿವಾರ ಸಕ್ಕರೆ ಕಾರ್ಖಾನೆ ಮಾಲೀಕರ ಹಾಗೂ ರೈತ ಪ್ರತಿನಿಧಿಗಳ ಸಭೆಯನ್ನು ವಿಧಾನಸೌಧದಲ್ಲಿ ಸಕ್ಕರೆ ಸಚಿವರ ಅಧ್ಯಕ್ಷತೆಯಲ್ಲಿ ಕರೆಯಲಾಗಿತ್ತು, ಸುಮಾರು ಮೂರು ಗಂಟೆಗಳ ಕಾಲ ಚರ್ಚೆ ನಡೆದರು ಯಾವುದೇ ತೀರ್ಮಾನವಾಗಲಿಲ್ಲ ಸಕ್ಕರೆ ಸಚಿವ ಶಂಕರ್ ಪಾಟೀಲ್ ಮುನೇನಕೊಪ್ಪ ಮಾತನಾಡಿ ಸಭೆಯಲ್ಲಿ ರೈತ ಮುಖಂಡರು ಪ್ರಸ್ತಾಪಿಸಿರುವ ವಿಷಯಗಳ ಬಗ್ಗೆ ಎರಡು ದಿನದಲ್ಲಿ ಮುಖ್ಯಮಂತ್ರಿಗಳ ಜೊತೆ ಚರ್ಚಿಸಿ, ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿ ಮತ್ತೊಮ್ಮೆ ರೈತ ಪ್ರತಿನಿಧಿಗಳ ಸಭೆ ಕರೆದು ರೈತರಿಗೆ ಸಿಹಿ ಸುದ್ದಿ ನೀಡುವುದಾಗಿ ತಿಳಿಸಿ ಸಭೆಯನ್ನು ಮುಕ್ತಾಯಗೊಳಿಸಿದರು
ಸಭೆಯಲ್ಲಿ ಭಾಗವಹಿಸಿದ್ದ ರೈತರು ಇವತ್ತೇ ಕಬ್ಬುದರ ನಿಗದಿಯಾಗಬೇಕು ಎಂದು ಪಟ್ಟು ಹಿಡಿದಾಗ ಮುಖ್ಯಮಂತ್ರಿಗಳು ಪ್ರವಾಸ ಹೋಗಿರುವ ಕಾರಣ ಎರಡು ದಿನದಲ್ಲಿ ತೀರ್ಮಾನ ಕೈಗೊಳ್ಳುವುದಾಗಿ ರೈತರ ಮನವೊಲಿಸಿದರು. ಪಂಜಾಬ್ ರಾಜ್ಯದಲ್ಲಿ 3800 ಉತ್ತರ ಪ್ರದೇಶದಲ್ಲಿ 3500 ಗುಜರಾತ್ ನಲ್ಲಿ 4400 ದರ ನಿಗದಿ ಮಾಡಿದ್ದಾರೆ ರಾಜ್ಯ ಸರ್ಕಾರವು ಇದನ್ನು ಗಮನಿಸಿ ರಾಜ್ಯ ಸಲಹಾ ಬೆಲೆಯನ್ನ ನ್ಯಾಯಯುತವಾಗಿ ನಿಗದಿ ಮಾಡಬೇಕು ಎಂದು ರಾಜ್ಯ ಕಬ್ಬು ಬೆಳೆಗಾರ ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ಒತ್ತಾಯಿಸಿದರು.
ಸಭೆಯಲ್ಲಿ ಭಾಗವಹಿಸಿದ ಸುನಂದ ಜಯರಾಮ್ ಕಬ್ಬು ಬೆಳೆಯುವ ರೈತರ ಸಂಕಷ್ಟವನ್ನು ವಿವರವಾಗಿ ತಿಳಿಸಿದರು, ರಾಜ್ಯ ರೈತ ಸಂಘದ ಬಡಗಲಪುರ ನಾಗೇಂದ್ರ, ಚೂನಪ್ಪ ಪೂಜಾರಿ, ರಮೇಶ್ ಹೂಗಾರ್, ಜೋಶಿ, ನಾರಾಯಣರೆಡ್ಡಿ, ಸುನೀತಾ ಪುಟ್ಟಣ್ಣಯ್ಯ, ಸುರೇಶ್ ಪಾಟೀಲ್, ಎಂ.ವಿ.ಗಾಡಿ, ತೇಜಸ್ವಿ ಪಟೇಲ್, ಆತ್ತಹಳಿ ದೇವರಾಜ್ ಕಬ್ಬು ಅಭಿವೃದ್ಧಿ ಆಯುಕ್ತ ಶಿವಾನಂದ ಕೆಲಗೇರಿ, ದಕ್ಷಿಣ ಭಾರತ ಸಕ್ಕರೆ ಖಾಸಗಿ ಸಕ್ಕರೆ ಕಾರ್ಖಾನೆಗಳ ಮಹಾಮಂಡಲ ಅಧ್ಯಕ್ಷ ಜಗದೀಶ್ ಗುಡುಗಂಟಿ ಇನ್ನೂ ಮುಂತಾದ 200 ಹೂ ಹೆಚ್ಚು ರೈತ ಪ್ರತಿನಿಧಿಗಳು ಭಾಗವಹಿಸಿದರು.













































































