ಬೆಂಗಳೂರು: ಬಿಜೆಪಿ ಹಾಗೂ ಜೆಡಿಎಸ್ ತೊರೆದು ಕಾಂಗ್ರೆಸ್ ಪಕ್ಷ ಸೇರಿದ ಜಯಪ್ರಕಾಶ್ ಹೆಗ್ಡೆ, ಸುಕುಮಾರ ಶೆಟ್ಟಿ, ಎಂ.ಪಿ ಕುಮಾರಸ್ವಾಮಿ ಅವರನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಮಂಗಳವಾರ ಪಕ್ಷದ ಬಾವುಟ ನೀಡಿ ಸ್ವಾಗತಿಸಿದರು.
ಈ ಸಂದರ್ಭದಲ್ಲಿ ಸಚಿವರಾದ ಡಾ. ಜಿ ಪರಮೇಶ್ವರ, ಕೆ ಜೆ ಜಾರ್ಜ್, ಮಧು ಬಂಗಾರಪ್ಪ, ಲಕ್ಷ್ಮಿ ಹೆಬ್ಬಾಳ್ಕರ್, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸಲೀಂ ಅಹ್ಮದ್, ಚಂದ್ರಪ್ಪ, ಶಾಸಕರಾದ ತಮ್ಮಯ್ಯ, ರಾಜೇಗೌಡ, ಮುಖಂಡರಾದ ಬಿ ಎಲ್ ಶಂಕರ್ ಮತ್ತಿತರರು ಉಪಸ್ಥಿತರಿದ್ದರು.