ಮಂಗಳೂರು: ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ ಹಾಗೂ ಉಡುಪಿಯಲ್ಲಿ ಶನಿವಾರ ರಾತ್ರಿ ಭಾರೀ ಮಳೆಯಾಗಿದೆ. ಈ ಜಿಲ್ಲೆಗಳಲ್ಲಿ ಭಾನುವಾರವೂ ಭಾರೀ ಮಳೇಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮಳೆ ಸಾಧ್ಯತೆ ಹಿನ್ನೆಲೆಯಲ್ಲಿ ಕರಾವಳಿ ಜಿಲ್ಲೆಗಳಲ್ಲಿ ಮೇ 18 ರಿಂದ 21ರ ವರೆಗೆ ಎಲ್ಲೋ ಅಲರ್ಟ್ ಘೊಷಣೆ ಮಾಡಿದ್ದು, ಕರಾವಳಿಯಲ್ಲಿ ಗುಡುಗು ಸಹಿತ ಉತ್ತಮ ಮಳೆ ಸುರಿಯುವ ನಿರೀಕ್ಷೆ ಇದೆ.