ಬೆಂಗಳೂರು: ಬಿರು ಬೇಸಿಗೆಯ ಬಿಸಿಲ ಹೊಡೆತದ ನಡುವೆ ಮಳೆಯ ಸಿಂಚನದ ಮುನ್ಸೂಚನೆ ಸಿಕ್ಕಿದೆ.
ಕರ್ನಾಟಕದ ಕೆಲವೆಡೆ ಮಳೆಯ ಸಿಂಚನವಾಗಿದೆ. ಮಾರ್ಚ್ 31ರಿಂದ ಇನ್ನೂ ಕೆಲವೆಡೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕೊಡಗು, ಹಾಸನ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಶಿವಮೊಗ್ಗ, ಮೈಸೂರು, ಚಾಮರಾಜನಗರ, ಚಿಕ್ಕಮಗಳೂರು ಹಲವು ಜಿಲ್ಲೆಗಳಲ್ಲಿ 31 ರಿಂದ ಎರಡು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.