ನವದೆಹಲಿ: ದಾವಣಗೆರೆ ಸೇರಿದಂತೆ ಕರ್ನಾಟಕದಲ್ಲಿ ಪ್ರತಿಷ್ಠಿತ BSNL ಮೊಬೈಲ್ ನೆಟ್ವರ್ಕ್ ಸಮಸ್ಯೆ ಬಗ್ಗೆ ಸಂಸದೆ ಸಂಸದೆ ಪ್ರಭಾ ಮಲ್ಲಿಕಾರ್ಜುನ ಕೇಂದ್ರದ ಗಮನಸೆಳೆದಿದ್ದಾರೆ.
ತಮ್ಮ ಕ್ಷೇತ್ರದಲ್ಲಿನ ಮೊಬೈಲ್ ಸಂಪರ್ಕ ಸಮಸ್ಯೆ ಹಾಗೂ ಅದರಿಂದ ರೈತರು, ವಿದ್ಯಾರ್ಥಿಗಳು ಸೇರಿದಂತೆ ಜನರು ಸಮಸ್ಯೆಗಳನ್ನು ಎದುರಿಸುತ್ತಿ ದ್ದಾರೆ. ಈ ಸಮಸ್ಯೆಗಳನ್ನು ಕೂಡಲೇ ಬಗೆಹರಿಸಿ ಎಂದು ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಸಂಸತ್ತಿನಲ್ಲಿ ಕನ್ನಡಿಗರ ಧ್ವನಿ!
ತಮ್ಮ ಕ್ಷೇತ್ರದಲ್ಲಿನ ಮೊಬೈಲ್ ಸಂಪರ್ಕ ಸಮಸ್ಯೆ ಹಾಗೂ ಅದರಿಂದ ರೈತರು, ವಿದ್ಯಾರ್ಥಿಗಳು ಸೇರಿದಂತೆ ಜನರು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ದಾವಣಗೆರೆ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಸಂಸದೆ ಪ್ರಭಾ ಮಲ್ಲಿಕಾರ್ಜುನ ಅವರು ಧ್ವನಿ ಎತ್ತಿದ್ದಾರೆ.#ParliamentWinterSession pic.twitter.com/wyuf2uCacu
— Karnataka Congress (@INCKarnataka) December 3, 2025

























































