ಕೋಲಾರ: ಕರ್ನಾಟಕ-ಆಂಧ್ರ ಗಡಿಯಲ್ಲಿ ಅಧಿಕಾರಿಗಳು ಕಾರಿನಲ್ಲಿ ಸಾಗುಸುತ್ತಿದ್ದ ಅಪಾರ ಪ್ರಮಾಣದ ಸ್ಫೋಟಕ ಪತ್ತೆಯಾದ ಪ್ರಕರಣದಲ್ಲಿ ಪೊಲೀಸರು ಒಬ್ಬನನ್ನ ವಶಕ್ಕೆ ಪಡೆದಿದ್ದಾರೆ.
ಕೋಲಾರ ಜಿಲ್ಲೆ ಮುಳಬಾಗಿಲು ಸಮೀಪ ಕರ್ನಾಟಕ-ಆಂಧ್ರ ಗಡಿಯ ನಂಗಲಿ ಚೆಕ್ ಪೋಸ್ಟ್ ನಲ್ಲಿ ಅಪಾರ ಪ್ರಮಾಣದ ಸ್ಫೋಟಕಗಳನ್ನು ಪೊಲೀಸರು ಪತ್ತೆ ಮಾಡಿ ವಶಕ್ಕೆ ಪಡೆದಿದ್ದರು. ಈ ಪ್ರಕರಣದಲ್ಲಿ ಒಬ್ಬನನ್ನ ಬಂಧಿಸಿರುವ ಪೊಲೀಸರು ತಲೆಮರೆಸಿಕೊಂಡಿರುವ ಮತ್ತೊಬ್ಬ ವ್ಯಕ್ತಿಗಾಗಿ ಬಲೆ ಬೀಸಿದ್ದಾರೆ.







































































