Aಬೆಂಗಳೂರು: ಕರ್ನಾಟಕ, ತಮಿಳುನಾಡು ಮತ್ತು ಕೇರಳ ರಾಜ್ಯಗಳ ನಡುವೆ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಸೇವೆಗೆ ತಯಾರಿ ನಡೆದಿದೆ. ರೈಲ್ವೆ ಸಚಿವಾಲಯವು ಬೆಂಗಳೂರು–ಎರ್ನಾಕುಲಂ ವಂದೇ ಭಾರತ್ ಎಕ್ಸ್‌ಪ್ರೆಸ್‌ನ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ.
ರೈಲ್ವೆ ಸಚಿವಾಲಯದ ಅಧಿಸೂಚನೆ ಪ್ರಕಾರ, ರೈಲು ಸಂಖ್ಯೆ 26651 ಕೆಎಸ್‌ಆರ್ ಬೆಂಗಳೂರು–ಎರ್ನಾಕುಲಂ ವಂದೇ ಭಾರತ್ ಎಕ್ಸ್‌ಪ್ರೆಸ್ ಪ್ರತಿ ದಿನ ಬೆಳಗ್ಗೆ 5:10ಕ್ಕೆ ಬೆಂಗಳೂರು ನಿಲ್ದಾಣದಿಂದ ಹೊರಟು, ಕೃಷ್ಣರಾಜಪುರಂ, ಸೇಲಂ, ಈರೋಡ್, ತಿರುಪ್ಪೂರು, ಕೊಯಮತ್ತೂರು, ಪಾಲಕ್ಕಾಡ್ ಮತ್ತು ತ್ರಿಶೂರ್ ನಿಲ್ದಾಣಗಳಲ್ಲಿ ನಿಗದಿತ ನಿಲುಗಡೆ ನಂತರ ಮಧ್ಯಾಹ್ನ 1:50ಕ್ಕೆ ಎರ್ನಾಕುಲಂ ಜಂಕ್ಷನ್ ತಲುಪಲಿದೆ. ಮರಳಿ, ರೈಲು ಸಂಖ್ಯೆ 26652 ಎರ್ನಾಕುಲಂನಿಂದ ಮಧ್ಯಾಹ್ನ 2:20ಕ್ಕೆ ಹೊರಟು, ರಾತ್ರಿ 11:00ಕ್ಕೆ ಬೆಂಗಳೂರಿಗೆ ತಲುಪಲಿದೆ. .
ಈ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ದಕ್ಷಿಣ ಭಾರತದ ರಾಜ್ಯಗಳ ಪ್ರಮುಖ ನಗರಗಳ ನಡುವಿನ ಸಂಚಾರ ಸಮಯವನ್ನು ಗಣನೀಯವಾಗಿ ಕಡಿಮೆ ಮಾಡುವ ನಿರೀಕ್ಷೆಯಿದೆ.


















































