ಬೆಂಗಳೂರು: ಕರ್ನಾಟಕ, ತೆಲಂಗಾಣ, ಆಂಧ್ರಪ್ರದೇಶ ಹೈಕೋರ್ಟ್’ಗಳ ಏಳು ನ್ಯಾಯಮೂರ್ತಿಗಳನ್ನು ವರ್ಗಾವಣೆ ಮಾಡಲಾಗಿದೆ. ಸುಪ್ರೀಂಕೋರ್ಟ್ ಕೊಲಿಜಿಯಂ ಶಿಫಾರಸು ಹಿನ್ನಲೆಯಲ್ಲಿ ಸೋಮವಾರ ಈ ವರ್ಗಾವಣೆ ಆದೇಶ ಹೊರಡಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ನ್ಯಾಯಮೂರ್ತಿ ಹೇಮಂತ್ ಚಂದನ ಗೌಡರ್ ಅವರನ್ನು ಕರ್ನಾಟಕ ಹೈಕೋರ್ಟ್‌ನಿಂದ ಮದ್ರಾಸ್ ಹೈಕೋರ್ಟ್‌ಗೆ, ನ್ಯಾಯಮೂರ್ತಿ ಕೃಷ್ಣನ್ ನಟರಾಜ ಅವರನ್ನು ಕರ್ನಾಟಕ ಹೈಕೋರ್ಟ್‌ನಿಂದ ಕೇರಳ ಹೈಕೋರ್ಟ್‌ಗೆ, ನ್ಯಾಯಮೂರ್ತಿ ಎನ್. ಶ್ರೀನಿವಾಸ ಸಂಜಯ್ ಗೌಡ ಅವರನ್ನು ಕರ್ನಾಟಕ ಹೈಕೋರ್ಟ್‌ನಿಂದ ಗುಜರಾತ್ ಹೈಕೋರ್ಟ್‌ಗೆ ವರ್ಗಾವಣೆ ಮಾಡಲಾಗಿದೆ.
ನ್ಯಾಯಮೂರ್ತಿ ಕೃಷ್ಣ ದೀಕ್ಷಿತ್ ಅವರನ್ನು ಕರ್ನಾಟಕ ಹೈಕೋರ್ಟ್‌ನಿಂದ ಒಡಿಶಾ ಹೈಕೋರ್ಟ್‌ಗೆ, ನ್ಯಾಯಮೂರ್ತಿ ಪೆರುಗು ಶ್ರೀಸುಧ ಅವರನ್ನು ತೆಲಂಗಾಣ ಹೈಕೋರ್ಟ್‌ನಿಂದ ಕರ್ನಾಟಕ ಹೈಕೋರ್ಟ್‌ಗೆ, ನ್ಯಾಯಮೂರ್ತಿ ಕೆ.ಸುರೇಂದರ್ ಅವರನ್ನು ತೆಲಂಗಾಣ ಹೈಕೋರ್ಟ್‌ನಿಂದ ಮದ್ರಾಸ್ ಹೈಕೋರ್ಟ್‌ಗೆ, ನ್ಯಾಯಮೂರ್ತಿ ಡಾ.ಕೆ.ಮನ್ಮಧ ರಾವ್ ಅವರನ್ನು ಆಂಧ್ರಪ್ರದೇಶ ಹೈಕೋರ್ಟ್‌ನಿಂದ ಕರ್ನಾಟಕ ಹೈಕೋರ್ಟ್‌ಗೆ ವರ್ಗಾವಣೆ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ. ಹೈಕೋರ್ಟ್ ಆಡಳಿತ ವ್ಯವಸ್ಥೆ ಗುಣಮಟ್ಟವನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ವರ್ಗಾವಣೆ ನಡೆದಿದೆ ಎನ್ನಲಾಗಿದೆ.