ಬೆಂಗಳೂರು: ಕಾವೇರಿ ವಿಚಾರದಲ್ಲಿ ಕರೆ ನೀಡಿರುವ ಕ’ರ್ನಾಟಕ ಬಂದ್ ಕೈಬಿಡುವಂತೆ ಕನ್ನಡ ಸಂಘಟನೆಗಳಿಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮನವಿ ಮಾಡಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಆರ್‌ಎಸ್ ಅಣೆಕಟ್ಟೆಯಿಂದ ಕಾವೇರಿ ನೀರು ಹರಿಸುವ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟಪಡಿಸಿದರು.
ಕಾವೇರಿ ಹೋರಾಟಗಾರರ ಬಗ್ಗೆ ನಮಗೆ ತಕರಾರು ಇಲ್ಲ, ಅವರ ಜೊತೆ ನಾವಿರುತ್ತೇವೆ ಎಂದ ಅವರು, ಕರ್ನಾಟಕ ಬಂದ್ ಕರೆಯನ್ನು ವಾಪಸ್ ಪಡೆಯುವಂತೆ ಕನ್ನಡಪರ ಸಂಘಟನೆಗಳ ಮುಂಂಡರಿಗೆ ಮನವಿ ಮಾಡಿದರು.. ಸೆ.29 ರಂದು ಮತ್ತೊಮ್ಮೆ ಬಂದ್ ಎಂದು ಹೇಳಲಾಗುತ್ತಿದೆ, ಇದರಿಂದ ಸಾವಿರಾರು ಕೋಟಿ ವಹಿವಾಟು ಹಾಳಾಗುತ್ತದೆ, ಶಾಲಾ ಮಕ್ಕಳಿಗೆ ತೊಂದರೆಯಾಗುತ್ತದೆ ಬಂದ್ ಬೇಡ ಎಂದು ಮನವಿ ಮಾಡಿದರು.
























































